ಬೆಳೆ ಹಾನಿ ಪರಿಹಾರ ನೀಡಲು ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ.

ಕೊಪ್ಪಳ: ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಹಾನಿಗೀಡಾದ ಆಸ್ತಿಪಾಸ್ತಿ ಹಾಗೂ ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.

ಕೊಪ್ಪಳ ತಾಲೂಕಿನಲ್ಲಿ ಸಿಂಗಟಾಲೂರ ಏತ ನೀರಾವರಿ ಕಾಮಗಾರಿ ಕಳಪೆಯಾಗಿದ್ದು ತನಿಖೆ ಮಾಡಲು ಅಗ್ರಹಿಸಿ ಹಾಗೂ ಮಳೆಯಿಂದ ಬೆಳೆ ನಾಶವಾಗಿದ್ದು ರೈತರಿಗೆ ಪರಿಹಾರ ನೀಡಲು ಅಗ್ರಹಿಸಿ ಪ್ರತಿಭಟನೆ ಮಾಡಲಾಯಿತು.

ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.

ಅಶೋಕ ವೃತ್ತದಿಂದ ತಹಶಿಲ್ದಾರ್ ಕಚೇರಿ ವರೆಗೆ ತೆರಳಿದ ಪ್ರತಿಭಟನಾ ರ‌್ಯಾಲಿ. ಸೂಕ್ತ ಬೆಳೆ ಹಾನಿ ಪರಿಹಾರ ನೀಡಬೇಕು. ಸಿಂಗಟಾಲೂರು ಏತ ನೀರಾವರಿಯ ಕಾಲುವೆ ಒಡೆದು ರೈತರ ಜಮೀನಿಗೆ ನುಗ್ಗಿದೆ.ರೈತರು ಬೆಳೆದ ಬೆಳೆ ಸಂಪೂರ್ಣ ಸರ್ವನಾಶವಾಗಿದೆ. ಭಾರಿ ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ಮನೆಗಳು ಬಿದ್ದಿವೆ. ಇದೆಲ್ಲದಕ್ಕೂ ಸೂಕ್ತ ಪರಿಹಾರ ನೀಡಬೇಕು.ಬಿದ್ದ ಮನೆಗಳ ಮಾಲೀಕರಿಗೆ ವಸತಿ ಸೌಕರ್ಯ ಕಲ್ಪಿಸಬೇಕು.ಸಿಂಗಟಾಲೂರು ಕಾಲುವೆ ಕಾಮಗಾರಿಯ ಕುರಿತು ತನಿಖೆ ಆಗಬೇಕು ಎಂದು ಆಗ್ರಹಿಸಿ ತಹಶಿಲ್ದಾರ್ ಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಕೆ‌.ಎಂ.ಸಯ್ಯದ್, ವಿರೇಶ ಮಹಾಂತಯ್ಯನಮಠ, ಜೀಲಾನ್ ಕಿಲ್ಲೆದಾರ್, ಕೆ.ಎಸ್.ಕೊಡತಗೇರಿ, ಮೌನೇಶ ಬಡಿಗೇರ ಮೆಹಮೂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.