ಭಾಗ್ಯನಗರ: ಅಂಬೇಡ್ಕರ್ ನಗರ ವಸತಿ ಯೋಜನೆಯಡಿ ಅರ್ಜಿ ಆಹ್ವಾನ

: ಭಾಗ್ಯನಗರ ಪಟ್ಟಣ ಪಂಚಾಯತ ವತಿಯಿಂದ ಪ್ರಸಕ್ತ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ನಗರ ವಸತಿ ಯೋಜನೆಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾಗ್ಯನಗರ ಪಟ್ಟಣ ಪಂಚಾಯತಗೆ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತದಡಿ ಡಾ. ಬಿ.ಆರ್. ಅಂಬೇಡ್ಕರ್ ನಗರ ವಸತಿ ಯೋಜನೆಗೆ ಪರಿಶಿಷ್ಟ ಜಾತಿ ವರ್ಗಕ್ಕೆ ೭೦ ಮನೆಯ ಗುರಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ೩೦ ಮನೆಯ ಗುರಿ, ಸೇರಿದಂತೆ ಒಟ್ಟು ೧೦೦ ಗುರಿಯನ್ನು ನಿಗದಿಪಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಮೂನೆ-೧ ರಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಅ. ೩೦ ರ ಸಂಜೆ ೦೫-೦೦ ಗಂಟೆಯೊಳಗಾಗಿ ಭಾಗ್ಯನಗರ ಪಟ್ಟಣ ಪಂಚಾಯತಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಭಾಗ್ಯನಗರ ಪಟ್ಟಣ ಪಂಚಾಯತಿ ಕಾರ್ಯಾಲಯ ಸಂಪರ್ಕಿಸಬಹುದು ಹಾಗೂ ಸೂಚನಾ ಫಲಕವನ್ನು ವೀಕ್ಷೀಸಬಹುದು ಎಂದು ಭಾಗ್ಯನಗರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.