ಭಾಗ್ಯನಗರ : ಪೌರಕಾರ್ಮಿಕರಿಗೆ ಸನ್ಮಾನ

ಕೊಪ್ಪಳ ಸೆ. 28 : ಕೊಪ್ಪಳ ತಾಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ್ ವತಿಯಿಂದ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಪ.ಪಂ. ಕಾರ್ಯಾಲಯದ ಮೂರು ಜನ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗ್ಯನಗರ ಪಟ್ಟಣ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು, ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಎಲ್ಲರ ಸಮ್ಮಖದಲ್ಲಿ ಪ.ಪಂ. ಕಾರ್ಯಾಲಯದ ಮೂರು ಜನ ಪೌರಕಾರ್ಮಿಕರನ್ನು ಸನ್ಮಾನಿಸುವುದರ ಮೂಲಕ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು

Related posts