ಭಾಗ್ಯನಗರ : ಪ್ಲಾಸ್ಟಿಕ್ ಬಳಕೆ ನಿಷೇಧ,ಉದ್ದಿಮೆ ಪರವಾನಿಗೆ ಪಡೆದುಕೊಳ್ಳಲು ಸೂಚನೆ

  ಕೊಪ್ಪಳ ತಾಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲು ಬಟ್ಟೆ, ಕೈಚೀಲಗಳನ್ನು, ಪರ್ಯಾಯ ವಸ್ತುಗಳನ್ನು ಉಪಯೋಗಿಸಬೇಕೆಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಎಲ್ಲಾ ಅಂಗಡಿಕಾರರು ಸಹ ತಮ್ಮ ತಮ್ಮ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಮಾಡಬಾರದು ಎಂದು ತಿಳುವಳಿಕೆ ನೀಡಲಾಗಿದೆ ಮತ್ತು ಪ್ಲಾಸ್ಟಿಕ್ ವಶ ಪಡೆಯುವಂತಹ ಕಾರ್ಯಕ್ರಮವನ್ನು ಈಗಾಗಲೆ ಭಾಗ್ಯನಗರ ವ್ಯಾಪ್ತಿಯಲ್ಲಿ ಮಾಡಲಾಗಿದೆ. ಭಾಗ್ಯನಗರ ಪಟ್ಟಣ ಪಂಚಾಯತ ಕಾರ್ಯಾಲಯದಿಂದ ಹಿರಿಯ ಆರೋಗ್ಯ ನಿರೀಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಹಾಗೂ ಅಂಗಡಿಗೆ ಭೇಟಿ ನೀಡಿದಾಗ ಪ್ಲಾಸ್ಟಿಕ್ ಕಂಡುಬಂದಲ್ಲಿ ನಿಯಮಾನುಸಾರ ಕ್ರಮ ವಹಿಸಲಾಗುವುದು. ಭಾಗ್ಯನಗರದ ಎಲ್ಲಾ ಸಾರ್ವಜನಿಕರು ತಮ್ಮ ಉದ್ದಿಮೆ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಮಾಡಬಾರದು. ನಿಯಮ ಉಲ್ಲಂಘಿಸಿದಲ್ಲಿ ಸಕ್ಷಮ ಪ್ರಾಧಿಕಾರಗಳು ವಿಧಿಸುವ ದಂಡಗಳಿಗೆ ಒಳಪಡಬೇಕಾಗುತ್ತದೆ ಎಂದು ಮುಖ್ಯಾಧಿಕಾರಿಗಳು  ಎಚ್ಚರಿಕೆ ನೀಡಿದ್ದಾರೆ.

ಕೊಪ್ಪಳ ತಾಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು, ತಾವು ನಡೆಸುವ ಉದ್ದಿಮೆಗಳಿಗೆ ಕಡ್ಡಾಯವಾಗಿ ಪ್ರಸಕ್ತ ಸಾಲಿನ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳಬೇಕು ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸೂಚನೆ ನೀಡಿದ್ದಾರೆ.
ಭಾಗ್ಯನಗರ ಪಟ್ಟಣ ಪಂಚಾಯತ ಕಾರ್ಯಾಲಯದಿಂದ ಹಿರಿಯ ಆರೋಗ್ಯ ನಿರೀಕ್ಷಕರು ಹಾಗೂ ಸಿಬ್ಬಂದಿ ವರ್ಗದವರು, ಭಾಗ್ಯನಗರ ವ್ಯಾಪ್ತಿಯಲ್ಲಿ ಉದ್ದಿಮೆ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡುವ ಕಾರ್ಯಕ್ರಮ ಹಾಕಿಕೊಂಡಿದ್ದು, ಎಲ್ಲಾ ಉದ್ದಿಮೆದಾರರು ತಾವು ನಡೆಸು ಉದ್ದಿಮೆಗೆ ಚಾಲ್ತಿ ಸಾಲಿನ ಕರಪಾವತಿ ರಶೀದಿ, ಖರೀದಿ ಪತ್ರ/ ಹಕ್ಕುಪತ್ರ/ ಚಾಲ್ತಿ ವರ್ಷದ ಬಾಡಿಗೆ ಪತ್ರ, ಆಧಾರ ಕಾರ್ಡ್, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ರೂ. ೨೦ ಛಾಪಾ ಕಾಗದ ಪತ್ರ ಇತ್ಯಾದಿಗಳೊಂದಿಗೆ ಆನ್ ಲೈನ್ ಉದ್ದಿಮೆ ಪರವಾನಿಗೆ ಅವಶ್ಯಕವಾಗಿ ಪಡೆಯಬೇಕು. ಇಲ್ಲವಾದಲ್ಲಿ ನಿಯಮಾನುಸಾರ ಕ್ರಮ ವಹಿಸಲಾಗುವುದು ಮತ್ತು ದಂಡ ವಿಧಿಸಲಾಗುವುದು

Please follow and like us:
error