ಕೊಪ್ಪಳ ಸೆ. : ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ನೀಡುವ ರಾಜ್ಯ ಪ್ರಶಸ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ. ೨೫.೦೦೦/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. ೧,೦೦,೦೦೦/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಿದ್ದು, ಜಿಲ್ಲೆಯ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಯವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿ ಸೆ. ೨೫ ರೊಳಗಾಗಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಅರ್ಜಿಯನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ
Please follow and like us: