fbpx

ಮಕ್ಕಳ ಭವಿಷ್ಯ ಉಜ್ವಲವಾಗಿ ರೂಪಿಸಿ : ರಾಜಶೇಖರ ಹಿಟ್ನಾಳ

ಇಂದಿನ ಮಕ್ಕಳು ಈ ನಾಡಿನ ಭವ್ಯ ಪ್ರಜೆಗಳಾಗಿದ್ದು, ಅವರಲ್ಲಿ ಅಡಗಿರುವ ವಿಶಿಷ್ಟವಾದ ಪ್ರತಿಭೆ ಗುರುತಿಸಿ ಅವಕಾಶ ನೀಡಿ ಮಕ್ಕಳ ಭವಿಷ್ಯ ಉಜ್ವಲವಾಗಿ ರೂಪಿಸಿಕೊಳ್ಳಲು ಪಾಲಕರು ಹಾಗೂ ಶಿಕ್ಷಕರು ಸಹಕರಿಸಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಹೇಳಿದರು.
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ, ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಗರನಾಡು ಸೇವಾ ಪ್ರತಿಷ್ಠಾನ ಇವರ ಸಹಯೋಗದಲ್ಲಿ ನಗರದ ಸಾಹಿತ್ಯ ಭವನದಲ್ಲಿ ಬುಧವಾರದಂದು ಹಮ್ಮಿಕೊಳ್ಳಲಾಗಿದ್ದ, ಕೊಪ್ಪಳ ಜಿಲ್ಲಾ ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರದ ದೇಶವು ಯುವಕರು ಹಾಗೂ ವಿದ್ಯಾರ್ಥಿಗಳನ್ನು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಹೊಂದಿದೆ. ಮಕ್ಕಳು ಹೂಗಳಿದ್ದಂತೆ, ಅವುಗಳನ್ನು ಬಾಡದಂತೆ ನೋಡಿಕೊಳ್ಳುವುದು ಬಹಳ ಮುಖ್ಯ. ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ವಾತಾವರಣವನ್ನು ಸೃಷ್ಟಸಿ, ಮಕ್ಕಳ ಮನಸ್ಸನ್ನು ಹೂವಿನಂತೆ ಅರಳಿಸಬೇಕು. ಇಂದು ಕೊಪ್ಪಳ ಜಿಲ್ಲಾ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಿರುವುದು ಹೆಮ್ಮೆಯ ವಿಷಯವಾಗಿದೆ. ಮಕ್ಕಳಿಗೆ ಶಿಕ್ಷಣದೊಂದಿಗೆ ಅವರಲ್ಲಿ ಅಡಗಿದ ಕಲೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಪಾಲಕರು ಮಕ್ಕಳ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿ, ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು. ದಿನಕ್ಕೆ ಒಂದು ಬಾರಿಯಾದರೂ ಶ್ರೇಷ್ಠ ವ್ಯಕ್ತಿಯನ್ನು ನೋಡಿ ಎಂದು ಸ್ವಾಮಿ ವಿವೆಕಾನಂದರವರು ಹೇಳಿದ್ದಾರೆ. ಅದರ ಅರ್ಥ ನಮ್ಮನ್ನು ನಾವೇ ಕನ್ನಡಿಯಲ್ಲಿ ನೋಡಿಕೊಳ್ಳಬೇಕು. ಏಕೆಂದರೆ ಪ್ರತಿಯೊಬ್ಬರಲ್ಲಿ ಒಂದೊಂದು ಪ್ರತಿಭೆ ಅಡಗಿರುತ್ತದೆ. ವಿಶಾಲವಾದ ಪ್ರಪಂಚದಲ್ಲಿ ಅವಕಾಶಕಗಳು ಸಾಕಷ್ಟು ಸಿಗುತ್ತವೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡು ಮುನ್ನುಗ್ಗಿದಾಗ ಯಶಸ್ಸು ಕಾಣಬಹುದು ಎಂದು ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಹೇಳಿದರು.
ಸಗರನಾಡು ಸೇವಾ ಪ್ರತಿಷ್ಠಾನ ಸಂಸ್ಥೆಯ ಅಧ್ಯಕ್ಷ ಪ್ರಕಾಶ ಅಗಡಿ ಅವರು ಮಾತನಾಡಿ, ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ಮಕ್ಕಳ ರಕ್ಷಣೆಯ ಜೊತೆಗೆ ಅವರ ಶಿಕ್ಷಣ, ಕಲೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಹೈದ್ರಾಬಾದ-ಕರ್ನಾಟಕ ಪ್ರದೇಶದಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ಮಕ್ಕಳ ಹಬ್ಬ ಎಂಬ ಕಾರ್ಯಕ್ರಮಗಳಂತಹ ವೆದಿಕೆಗಳಿಂದ ಪ್ರತಿಭೆಗಳು ಹೊರಹೊಮ್ಮಲು ಸಹಕಾರಿಯಾಗಿವೆ. ಕೊಪ್ಪಳ ಜಿಲ್ಲಾ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಮಕ್ಕಳ ನಾಟಕ, ಕಥೆ, ಚಿತ್ರಕಲೆ, ಭರತನಾಟ್ಯ, ಖವಾಲಿ, ಜಾನಪದ ಗೀತೆ, ದೇಶ ಭಕ್ತಿ ಗೀತೆ, ನೃತ್ಯ ಇತ್ಯಾದಿ ಕಲೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಇದರಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಧಾರವಾಡ ಜಿಲ್ಲೆಯಲ್ಲಿ ನಡೆಯುವ ರಾಜ್ಯ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣಾ ಸಿ. ಉಕ್ಕುಂದ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿರೇಂದ್ರ ನಾವದಗಿ, ಧಾರವಾಡ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರುಗಳಾದ ಗವಿಸಿದ್ದಪ್ಪ ಕರ್ಕಿಹಳ್ಳಿ, ಶ್ರೀನಿವಾಸ ಚಿತ್ರಗಾರ, ಬಿ. ಗಿರೀಶಾನಂದ ಜ್ಞಾನಸುಂದರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Please follow and like us:
error
error: Content is protected !!