ಮತದಾರರ ಪಟ್ಟಿ ಡಿ. 29 ಕೊನೆಯ ದಿನ : ಹೆಸರು ಸೇರಿಸಲು ಏನು ಮಾಡಬೇಕು ?

ಹೆಸರು ಸೇರಿಸಲು ಏನು ಮಾಡಬೇಕು ?

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಡಿ. 29 ರವರೆಗೆ ಅವಧಿ ವಿಸ್ತರಣೆ


ಕೊಪ್ಪಳ ಡಿ. : ಕೊಪ್ಪಳ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಸಂಬಂಧಪಟ್ಟ ಮತದಾನ ಕೇಂದ್ರಗಳಲ್ಲಿ ಹಾಗೂ ತಹಶೀಲ್ದಾರ ಕಾರ್ಯಾಲಯದಲ್ಲಿ ಪ್ರಕಟಿಸಲಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಆಕ್ಷೇಪಣೆ ಸಲ್ಲಿಸಲು ಅವಧಿಯನ್ನು . 30 ರಿಂದ ಡಿ. 29 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
ಅರ್ಹತಾ ದಿನಾಂಕ 01-01-2018 ಆಧಾರದ ಮೇಲೆ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯದ ಸಲುವಾಗಿ ಹಿಂದೆ ಹೊರಡಿಸಲಾದ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ರದ್ದುಗೊಳಿಸಿ, ಹೊಸದಾಗಿ ಕಾರ್ಯಕ್ರಮವ ವೇಳಾಪಟ್ಟಿಯನ್ನು ನೀಡಿದೆಆದ್ದರಿಂದ ಕೊಪ್ಪಳ ಜಿಲ್ಲೆಯ, 60-ಕುಷ್ಟಗಿ, 61-ಕನಕಗಿರಿ, 62-ಗಂಗಾವತಿ, 63-ಯಲಬುರ್ಗಾ ಮತ್ತು 64-ಕೊಪ್ಪಳ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯ ನಡೆಯುತ್ತದೆ.
ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯಕ್ರಮದ ವೇಳಾ ಪಟ್ಟಿ ಇಂತಿದೆ, ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ. 29 ಕೊನೆಯ ದಿನವಾಗಿರುತ್ತದೆಡಿ. 06 ಮತ್ತು 21 ರಂದು ಗ್ರಾಮೀಣ/ ನಗರ ಸ್ಥಳೀಯ ಸಂಸ್ಥೆಗಳ ಗ್ರಾಮ ಸಭೆಗಳಲ್ಲಿ ಮತದಾರರ ಪಟ್ಟಿಗಳ ಓದುವಿಕೆಡಿ. 03 ಮತ್ತು 17 ರಂದು ರಾಜಕೀಯ ಪಕ್ಷಗಳಿಂದ ನೇಮಿಸಿದ ಬೂತ್ ಮಟ್ಟದ ಏಜೆಂಟ್ (ಬಿ.ಎಲ್.) ಗಳಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸುವ ವಿಶೇಷ ಆಂದೋಲನ ಜಿಲ್ಲೆಯಲ್ಲಿ ಕೈಗೊಳ್ಳಲಾಗುವುದು.  2018 ಜನೇವರಿ. 20 ರಂದು ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳ ವಿಲೆವಾರಿ ನಡೆಯಲಿದ್ದು, ಜನೇವರಿ. 15 ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು.
ಕೊಪ್ಪಳ ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು, ಮತದಾರರ ಪಟ್ಟಿಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮತ್ತು ಬದಲಾವಣೆಗಳು ಇದ್ದಲ್ಲಿ ಡಿ. 29 ಒಳಗಾಗಿ ಆಯಾ ಬೂತ್ ಮಟ್ಟದ ಅಧಿಕಾರಿಗಳಿಗೆ/ ಮತದಾನ ಕೇಂದ್ರಗಳಲ್ಲಿ/ ತಹಶೀಲ್ದಾರರ ಕಾರ್ಯಾಲಯಗಳಲ್ಲಿ/ ಸಹಾಯಕ ಆಯುಕ್ತರು, ಕೊಪ್ಪಳ ಇವರ ಕಾರ್ಯಾಲಯಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Related posts