ಮತದಾರರ ಪಟ್ಟಿ ಪರಿಷ್ಕರಣೆಗೆ ನ. 23 ರಿಂದ ವಿಶೇಷ ನೋಂದಣಿ ಅಭಿಯಾನ : ಪಿ. ಸುನೀಲ್ ಕುಮಾರ

ಕೊಪ್ಪಳ ನ. ): 2019ರ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನ. 23 ರಿಂದ ವಿಶೇಷ ನೋಂದಣಿ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಅವರು ತಿಳಿಸಿದ್ದಾರೆ.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ ಭಾಗವಾಗಿ ನ. 23 ರಿಂದ 25 ರವರೆಗೆ ಮೂರು ದಿನಗಳ ಕಾಲ “ವಿಶೇಷ ನೋಂದಣಿ” ಅಭಿಯಾನವನ್ನು ಕೊಪ್ಪಳ ಜಿಲ್ಲೆಯಾದ್ಯಂತ ಕೈಗೊಳ್ಳಲಾಗಿದೆ.
ಮತದಾರರ ಪಟ್ಟಿ ಪರಿಷ್ಕರಣಾ ಅವಧಿಯಲ್ಲಿ ನೊಂದಾಯಿತರಾಗದ ಅರ್ಹ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಲು ಅನುಕೂಲವಾಗುವಂತೆ ಈ “ವಿಶೇಷ ನೋಂದಣಿ” ಅಭಿಯಾನವನ್ನು ಆಯೋಜಿಸಲಾಗಿದ್ದು, ಈವರೆಗೂ ನೊಂದಾಯಿತರಾಗದ ಅರ್ಹ ಕೊಪ್ಪಳ ಜಿಲ್ಲೆಯ ಮತದಾರರು ನ. 23 ರಿಂದ 25 ರೊಳಗಾಗಿ ಸಂಬಂಧಪಟ್ಟ ಮತಗಟ್ಟೆ ಅಧಿಕಾರಿಗಳಲ್ಲಿ ಅರ್ಜಿಯನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ. ಈ ಅವಕಾಶವನ್ನು ಉಪಯೋಗಿಸಿಕೊಂಡು ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಅವರು ಜಿಲ್ಲೆಯ ಸಾರ್ವಜನಿಕರಲ್ಲಿ ಕೋರಿದ್ದಾರೆ.

Please follow and like us:
error