ಮಲೇರಿಯಾ ರೋಗ ಹರಡುವಿಕೆ ತಡೆಗಟ್ಟಲು ಕ್ರಮ ಕೈಗೊಳ್ಳಿ : ಡಾ. ಹೆಚ್. ರಾಮಕೃಷ್ಣ

: ಕೊಪ್ಪಳ ಜಿಲ್ಲೆಯಲ್ಲಿ ಮಲೇರಿಯಾ ರೋಗದ ಹರಡುವಿಕೆ, ನಿಯಂತ್ರಣ ಹಾಗೂ ತಡೆಗಟ್ಟಲು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್. ರಾಮಕೃಷ್ಣ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲೆಯಲ್ಲಿ ಮಲೇರಿಯಾ ರೋಗದ ಹರಡುವಿಕೆ, ನಿಯಂತ್ರಣ ಹಾಗೂ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಜಿಲ್ಲೆಯ ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವ? ‘ಏಪ್ರಿಲ್ ೨೫’ ರಂದು ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವದಾದ್ಯಂತ ‘ವಿಶ್ವ ಮಲೇರಿಯ ದಿನ’ ವನ್ನಾಗಿ ಆಚರಿಸುತ್ತದೆ. ಭಾರತದಲ್ಲಿಯೂ ಸಹ ಕೇಂದ್ರ ಆರೋಗ್ಯ ಸಚಿವಾಲಯವು ಇದೇ ದಿನದಂದು ವಿಶ್ವ ಮಲೇರಿಯ ದಿನಾಚರಣೆಯನ್ನು ಆಚರಿಸಲು ಎಲ್ಲ ರಾಜ್ಯಗಳಿಗೂ ಸೂಚಿಸಿದೆ. ಅದರಂತೆ ಎಲ್ಲ ಜಿಲ್ಲೆ ಹಾಗು ತಾಲ್ಲೂಕು ಮಟ್ಟದಲ್ಲಿ ವಿವಿಧ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ವಿರುಪಾಕ್ಷರೆಡ್ಡಿ ಎಸ್. ಮಾದಿನೂರ ಮಾತನಾಡಿ, ದೇಶದಾದ್ಯಂತ ೨೦೩೦ ರೊಳಗಾಗಿ ಮಲೇರಿಯಾ ರೋಗವನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಗುರಿ ನಿಗದಿಪಡಿಸಿ ರಾಷ್ಟ್ರೀಯ ಮಲೇರಿಯಾ ನಿವಾರಣಾ ಮಾರ್ಗದರ್ಶಿ ರೂಪಿಸಲಾಗಿದೆ. ಅದರಂತೆ ಕರ್ನಾಟಕ ಸರಕಾರವು ಕೂಡ ರಾಜ್ಯದಲ್ಲಿ ಮಲೇರಿಯಾ ನಿವಾರಣಾ ಮಾರ್ಗದರ್ಶಿಯನ್ನು ಅನಾವರಣಗೊಳಿಸಿದ್ದು, ರಾಜ್ಯದಲ್ಲಿ ೨೦೨೫ ನೇ ಇಸ್ವಿ ವೇಳೆಗೆ ಮಲೇರಿಯಾ ಮುಕ್ತಗೊಳಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಪ್ರಸಕ್ತ ಸಾಲಿನ ವಿಶ್ವ ಮಲೇರಿಯ ದಿನಾಚರಣೆಯ ಘೋ?ಣೆಯು ಮಲೇರಿಯಾ ಕೊನೆಗೊಳಿಸಲು ಸಿದ್ಧರಾಗಿ (ರೇಡಿ ಟು ಬೀಟ್ ಮಲೇರಿಯಾ) ಎಂಬುದಾಗಿರುತ್ತದೆ. ಅದರಂತೆ ಕೊಪ್ಪಳ ಜಿಲ್ಲೆಯನ್ನು ೨೦೨೫ರ ವೇಳೆಗೆ ಸಂಪೂರ್ಣ ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಸರ್ವರ ಸಹಕಾರ ಅಗತ್ಯವಾಗಿದೆ. ೨೦೧೭ನೇ ಸಾಲಿನಲ್ಲಿ ರಾಜ್ಯದ ಒಟ್ಟು ಮಲೇರಿಯಾ ಪ್ರಕರಣಗಳಲ್ಲಿ ಮಂಗಳೂರು ಮೊದಲನೇ ಸ್ಥಾನದಲ್ಲಿದ್ದು ನಂತರದಲ್ಲಿ ಉಡುಪಿ, ಉತ್ತರಕನ್ನಡ, ಯಾದಗಿರಿ, ಗದಗ, ಕಲ್ಬುರ್ಗಿ, ಬಾಗಲಕೋಟೆ ಜಿಲ್ಲೆಗಳು ಕ್ರಮವಾಗಿ ೨, ೩, ೪, ೫, ೬, ಮತ್ತು ೭ ನೇ ಸ್ಥಾನದಲ್ಲಿವೆ ಹಾಗೂ ಕೊಪ್ಪಳ ಜಿಲ್ಲೆ ೮ನೇ ಸ್ಥಾನದಲ್ಲಿದೆ. ಆದರೆ ಕೊಪ್ಪಳ ಜಿಲ್ಲೆಯಲ್ಲಿ ೨೦೧೬ನೇ ಸಾಲಿಗೆ ಹೋಲಿಸಿದಲ್ಲಿ ಶೇ ೬೦ರ? ಇಳಿಕೆ ಕಂಡುಬಂದಿರುತ್ತದೆ. ಅಲ್ಲದೆ, ಕಳೆದ ಅನೇಕ ವ?ಗಳಿಂದ ಜಿಲ್ಲೆಯಲ್ಲಿ ಮಲೇರಿಯ ರೋಗದಿಂದ ಯಾವುದೇ ಮರಣವು ಸಂಭವಿಸಿರುವುದಿಲ್ಲ ಎಂಬುದು ಸಮಾಧಾನಕರ ವಿ?ಯವಾಗಿದೆ. ಮಲೇರಿಯಾ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಸಮರೋಪಾದಿಯಲ್ಲಿ ಮಲೇರಿಯ ನಿಯಂತ್ರಣ ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ವಿ.ಬಿ.ಡಿ ಸಲಹೆಗಾರರಾದ ರಮೇಶ್. ಕೆ ಮಾತನಾಡಿ ೨೦೧೭ ರಲ್ಲಿ ಜಿಲ್ಲೆಯ ಕೊಪ್ಪಳ ತಾಲೂಕಿನಲ್ಲಿ ೧೪, ಗಂಗಾವತಿ-೨೯, ಕುಷ್ಟಗಿ-೯೩, ಯಲಬುರ್ಗಾ-೨೭, ಒಟ್ಟು ಜಿಲ್ಲೆಯಲ್ಲಿ ೧೫೯ ಮಲೇರಿಯಾ ಪ್ರಕರಣಗಳು ವರದಿಯಾಗಿವೆ. ೨೦೦೫ ರಲ್ಲಿ ೬೬೩೪ ಮಲೇರಿಯಾ ಪ್ರಕರಣಗಳು ವರದಿಯಾಗಿತ್ತು. ೨೦೧೭ ರಲ್ಲಿ ಕೇವಲ ೧೫೯ ಮಲೇರಿಯಾ ಪ್ರಕರಣಗಳು ವರದಿಯಾಗಿವೆ. ಮಲೇರಿಯಾ ನಿವಾರಣೆಗೆ ಪೂರಕವಾಗುವಂತೆ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳನ್ನು ವಿವಿಧ ಹಂತದ ಮಲೇರಿಯಾ ಶ್ರೇಣೀಕರಣ/ ವರ್ಗಿಕರಣ ಮಾಡಲಾಗಿದ್ದು, ಸೂಕ್ಷ್ಮ ಕ್ರಿಯಾ ಯೋಜನೆ ತಯಾರಿಸಿದ್ದು ಅವುಗಳನ್ನು ಜಿಲ್ಲೆಯಲ್ಲಿ ಸೂಕ್ತ ರೀತಿಯಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆಯು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವುಗಳಲ್ಲಿ ಶೀಘ್ರ ರೋಗಪತ್ತೆ ಮತ್ತು ಸಂಪೂರ್ಣ ಚಿಕಿತ್ಸೆ ತತ್ವದ ಆಧಾರದ ಮೇಲೆ ೨೪ ಗಂಟೆಗಳೊಳಗೆ ರೋಗಪತ್ತೆ ಮಾಡಿ ಸಂಪೂರ್ಣ ಚಿಕಿತ್ಸೆ ನೀಡಲಾಗುತ್ತದೆ. ಜಿಲ್ಲೆಯ ಎಲ್ಲಾ ಉಪಕೇಂದ್ರ ಮತ್ತು ಹಳ್ಳಿಗಳಲ್ಲಿ ಮಲೇರಿಯಾ ಸಮಸ್ಯಾತ್ಮಕ ಹಳ್ಳಿಗಳಲ್ಲಿ ವರ್ಷಕ್ಕೆರಡು ಬಾರಿ ಒಳಾಂಗಣ ಕೀಟನಾಶಕ ಸಿಂಪರಣೆಯನ್ನು ಮಾಡಲಾಗುತ್ತಿದೆ. ಹಾಗೂ ಆಯ್ದ ಸಮಸ್ಯಾತ್ಮಕ ಹಳ್ಳಿಗಳಿಗೆ ಧೀರ್ಘಬಾಳಿಕೆಯ ಕೀಟನಾಶಕ ಲೇಪಿತ ಸೊಳ್ಳೆ ಪರದೆಗಳನ್ನು ನೀಡಲಾಗುತ್ತಿದೆ ಮತ್ತು ಮಲೇರಿಯಾ ಸಮಸ್ಯಾತ್ಮಕ ಗ್ರಾಮ ಪಂಚಾಯತ್‌ಗಳಲ್ಲಿ ಜನಜಾಗೃತಿ ಸಭೆಗಳನ್ನು ಏರ್ಪಡಿಸಿ ಜನಪ್ರತಿನಿಧಿಗಳಿಗೆ ಹಾಗೂ ಜನಸಮುದಾಯಕ್ಕೆ ಅರಿವು ಮೂಡಿಸಲಾಗುತ್ತಿದೆ. ಆಯ್ದ ಸಮಸ್ಯಾತ್ಮಕ ಪ್ರದೇಶಗಳ ಶಾಲಾ ಕಾಲೇಜುಗಳಲ್ಲಿ ಮಲೇರಿಯಾ ಹರಡುವಿಕೆ ಹಾಗೂ ತಡೆಗಟ್ಟುವಿಕೆಯ ಬಗ್ಗೆ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ದೆ, ಕ್ವಿಜ್ ಕಾರ್ಯಕ್ರಮಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಲೇರಿಯಾ ನಿಯಂತ್ರಣ ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error