ಮಹಿಳಾ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಕುರಿತ ಪರಿಶೀಲನಾ ಸಭೆ ನ. ೧೪ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮೀ ಬಾಯಿ ಅವರು ವಹಿಸುವರು. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ತಿಳಿಸಿದ್ದಾರೆ.
Please follow and like us: