ಮಾಸ್ಕ್ ಬಳಕೆ ಮಾಡಿ ಕರೋನಾ ಮತ್ತು ಕ್ಷಯ ಮುಕ್ತ ಸಮಾಜ ನಿರ್ಮಾಣ ಮಾಡೋಣ : ಡಿ.ಹೆಚ್.ಒ

ಕೊಪ್ಪಳ, ಜೂ. : ಮಾಸ್ಕ್ ಬಳಕೆ ಮಾಡಿ ಕರೋನಾ ಮತ್ತು ಕ್ಷಯರೋಗ ಮುಕ್ತ ಸಮಾಜ ನಿರ್ಮಾಣ ಮಾಡೋಣ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಟಿ,ಬಿ ವಿಭಾಗ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರದಂದು (ಜೂನ್ 18ರಂದು)  ನಗರದ ಹಳೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ಮಾಸ್ಕ್ (ಮುಖಗವಸ) ದಿನಾಚರಣೆಯ ಅಂಗವಾಗಿ ನಗರದಲ್ಲಿ ನಡೆದ “ಜಾಗೃತಿ ಜಾಥಾ” ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಮಾಸ್ಕ್ ಬಳಕೆಯಿಂದ ಕರೋನ್ ಮತ್ತು ಕ್ಷಯ ಮುಕ್ತ ಸಮಾಜ ನಿರ್ಮಾಣ ಮಾಡವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು ಪ್ರಸ್ತುತ ಅವಧಿಯಲ್ಲಿ ಕರೋನ್ ವೈರಸ್ ಖಾಯಿಲೆ ಹರಡಿದೆ. ಅದನ್ನು ಜಿಲ್ಲೆ ಮತ್ತು ದೇಶದಿಂದ ಮುಕ್ತ ಗೊಳಿಸಬೇಕಾದರೆ ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕರೋನ್ ವೈರಸ್ ಮುಖ್ಯವಾಗಿ ಸೋಂಕಿತ ವ್ಯಕ್ತಿಯು ಕೆಮ್ಮಿದಾಗ ಮತ್ತು ಸೀನಿದಾಗ, ಹಸ್ತಲಾಗ ಮಾಡುವದರಿಂದ, ಅವರು ಬಳಸಿದ ವಸ್ತುಗಳನ್ನು ಬಳಸುವದರಿಂದ, ಅಸುರಕ್ಷಿತ ಕೈಗಳಿಂದ, ಮೂಗು, ಬಾಯಿ, ಕಣ್ಣು ಮುಟ್ಟಿಕೊಳ್ಳುವದರಿಂದ ಒಬ್ಬರಿಂದ ಇನ್ನೂಬ್ಬರಿಗೆ ಹರಡುತ್ತದೆ. ಮಾಸ್ಕ್ ಧರಿಸುವದರಿಂದ ರೋಗ ಉಲ್ಬಣವಾಗುವದನ್ನು ಕಡಿಮೆ ಮಾಡಬಹುದು ಎಂದರು.
ಕರೋನ್ ವೈರಸ್ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನಿಮೋನಿಯಾ, ಬೇಧಿಯಂತಹ ಲಕ್ಷಣಗಳ ಇದ್ದರೆ ತಮ್ಮ ಸಮೀಪದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ. ಕಡ್ಡಾಯವಾಗಿ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು. ಜನಸಂದಣೆ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯವಾಗಿದೆ. ಮಾಸ್ಕ್ ಬಳಸಿ ನಿಮ್ಮನ್ನು ಮತ್ತು ನಿಮ್ಮ ಸುತ್ತ ಮುತ್ತಲಿನವರನ್ನು ರಕ್ಷಿಸಬೆಕು. ಪ್ರತಿಯೊಬ್ಬರು ಮನೆಯಿಂದ ಹೊರಗೆ ಹೋಗುವಾಗ ಮನೆಯಲ್ಲಿ ತಯಾರಿಸಿದ ಮಾಸ್ಕ್ ಬಳಸಿ, ಕೈಗಳನ್ನು ಸೋಪಿನಿಂದ ಆಗಾಗ ತೊಳೆದುಕೊಳ್ಳಬೇಕು. ಗರ್ಭಿಣಿಯರು, 10 ವರ್ಷದೊಳಗಿನ ಮಕ್ಕಳು ಮತ್ತು 60 ವರ್ಷ ಮೇಲ್ಪಟ್ಟ ವೃದ್ದರು ಹಾಗೂ ಇತರೆ ದೀರ್ಘ ಕಾಲದ ಚಿಕಿತ್ಸೆ ಪಡೆಯುತ್ತಿದ್ದರೆ, ಮನೆಯಿಂದ ಆಚೆ ಹೋಗದಂತೆ ಎಚ್ಚರ ವಹಿಸಬೇಕು. ಸಾರ್ವಜನಿಕ ಸ್ಥಳಗಳಗಲ್ಲಿ ಮಧ್ಯ, ತಂಬಾಕು ಸೇವನೆ, ಎಲ್ಲಂದರಲ್ಲಿ ಉಗಳುವುದನ್ನು ನಿಷೇಧಿಸಲಾಗಿದೆ. ಆರೋಗ್ಯ ಸೇತು ಆಪ್‌ನ್ನು ಡೌನ್‌ಲೋಡ್ ಮಾಡಿಕೊಂಡು ಕರೋನ್ ವಿರುದ್ದ ಹೋರಾಡಿ. ಆಪ್ತ ಮಿತ್ರ ಸಹಾಯವಾಣಿ 14410 ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಮಾಸ್ಕ್ ಬಳಸಿದ ನಂತರ ಅದನ್ನು ಎಲ್ಲೆಂದರಲ್ಲಿ ಬಿಸಾಡದೆ ನಿಗದಿಪಡಿಸಿದ ಸ್ಥಳಗಳಲ್ಲಿ ಹಾಕಿಬೇಕು ಎಂದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹೇಶ ಎಂ.ಜಿ ಇವರು ಮಾತನಾಡಿ ಮಾಸ್ಕ್ ಬಳಕೆಯಿಂದ ಕ್ಷಯ ಮತ್ತು ಕರೋನ್ ಮುಕ್ತ ರಾಷ್ಟç ನಿರ್ಮಾಣ ಮಾಡುವದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ದೀರ್ಘಾವದಿಯ ಕೆಮ್ಮು, ಜ್ವರ, ಕಫ ಬರುವುದು, ತೂಕ ಕಡಿಮೆಯಾಗುವುದು ಇಂತಹ ಲಕ್ಷಣಗಳು ಇದ್ದರೆ ತಮ್ಮ ಸಮೀಪದ ಆಸ್ಪತ್ರೆಯಲ್ಲಿ ಗಂಟಲು ದ್ರವ ಮತ್ತು ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕ್ಷಯ ಮತ್ತು ಕೊರೋನಾ ಬಗ್ಗೆ ಭಯ ಬೇಡ ಎಚ್ಚರಿಕೆ ಇರಲಿ. ಕ್ಷಯರೋಗದ ಪರೀಕ್ಷೆ ಮತ್ತು ಚಿಕಿತ್ಸೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತದೆ. ಕ್ಷಯ ಮತ್ತು ಕರೋನಾ ರೋಗದ ವಿರುದ್ದ ಹೋರಾಡಲು ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಶ್ರಮಿಸಬೇಕು ಎಂದು ತಿಳಿಸಿದರು.
ಜಾಗೃತಿ ಕಾರ್ಯಕ್ರಮ;
ಜಾಗೃತಿ ಜಾಥಾ ಕಾರ್ಯಕ್ರಮ ಹಳೆ ಜಿಲ್ಲಾ ಆಸ್ಪತ್ರೆ ಆವರಣದಿಂದ ಕೇಂದ್ರ ಬಸ್ ನಿಲ್ದಾಣ, ಕಾರ್ಮಿಕರ ವೃತ್ತ, ಡಾ.ಸಿಂಪಿಲಿAಗಣ್ಣ ರಸ್ತೆ, ನಗರ ಪೋಲಿಸ್ ಸ್ಟೇಷನ್ ಕಛೇರಿ, ದಿವಟರ್ ರಸ್ತೆ, ಅಶೋಕ ವೃತ್ತ ಮಾರ್ಗವಾಗಿ ಆಶಾ ಮತ್ತು ಇಲಾಖೆಯ ಸಿಬ್ಬಂದಿ ವರ್ಗದವರು ಮಾಸ್ಕ್ ಧರಿಸುವ ಬಗ್ಗೆ ಘೋಷಣೆ ಕೂಗುತ್ತಾ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಎಸ್.ಬಿ ದಾನರೆಡ್ಡಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಜಂಬಯ್ಯ ಬಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿರುಪಾಕ್ಷರೆಡ್ಡಿ ಮಾದಿನೂರು, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗೌರಿಶಂಕರ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಎಸ್.ಕೆ ದೇಸಾಯಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಇರ್ಪಾನ್ ಅಂಜುಮ್, ತಾಲೂಕ ಆರೋಗ್ಯಾಧಿಕಾರಿ ಡಾ.ರಾಮಾಂಜನೇಯ, ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ನಾಗರಾಜ ಜುಮ್ಮನ್ನವರು, ಕಚೇರಿ ಅಧೀಕ್ಷರು, ವೈದ್ಯರು ಮತ್ತು ಸಿಬ್ಬಂದಿಗಳು ಸೇರಿದಂತೆ ಆರೋಗ್ಯ ಶಿಕ್ಷಣಾಧಿಕಾರಿಗಳು, ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರು, ಎಂ.ಎಲ್.ಹೆಚ್.ಪಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Please follow and like us:
error