ಮಾ. 19 ರಂದು ಯಲಬುರ್ಗಾದಲ್ಲಿ ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ

  ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸುವ ಸಮಾರಂಭ ಮಾ. 19 ರಂದು ಯಲಬುರ್ಗಾದ ಸಾರ್ವಜನಿಕ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಮಾರಂಭದ ಉದ್ಘಾಟನೆ ನೆರವೇರಿಸುವರು. ಅಲ್ಲದೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳು ಹಾಗೂ ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್, ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಈಶ್ವರ ಭೀಮಣ್ಣ ಖಂಡ್ರೆ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವೀರ್ ಸೇಠ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ ಕುಲಕರ್ಣಿ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಯು.ಟಿ ಖಾದರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಎಚ್. ಆಂಜನೇಯ, ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಅವರು ಪಾಲ್ಗೊಳ್ಳುವರು.
ಕೊಪ್ಪಳ ಜಿ.ಪಂ. ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ಕೆ. ರಾಘವೇಂದ್ರ ಹಿಟ್ನಾಳ್, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ ಉಪಾಧ್ಯಕ್ಷೆ ಲಕ್ಷಮ್ಮ ಸಿದ್ದಪ್ಪ ನೀರಲೂಟಿ, ಯಲಬುರ್ಗಾ ತಾ.ಪಂ ಅಧ್ಯಕ್ಷೆ ಲಕ್ಷ್ಮೀ ದ್ಯಾಮಪ್ಪ ಗೌಡ್ರ, ಪ.ಪಂ ಅಧ್ಯಕ್ಷೆ ಜಯಶ್ರೀ ಶರಣಪ್ಪ ಅರಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್, ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಹಾಗೂ ಕಲಬುರಗಿ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ಅಭಿವೃದ್ಧಿ ಕಾರ್ಯಕ್ರಮಗಳ ವಿವರ :
********* ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಮಾ. 19 ರಂದು ಮುಖ್ಯಮಂತ್ರಿಗಳಿಂದ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೊಳ್ಳಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ವಿವರ ಇಂತಿದೆ. ರೂ. 295 ಕೋಟಿ ವೆಚ್ಚದಲ್ಲಿ ಯಲಬುರ್ಗಾ ಮತ್ತು ಕೊಪ್ಪಳ ತಾಲೂಕಿನ ಕೆರೆಗಳಿಗೆ ತುಂಗಭದ್ರಾ ನದಿಯಿಂದ ಕೆರೆತುಂಬಿಸುವ ಯೋಜನೆ ಶಂಕುಸ್ಥಾಪನೆ. ರೂ. 25 ಕೋಟಿ ವೆಚ್ಚದಲ್ಲಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ಕಟ್ಟಡ (ಎಸ್.ಡಿ.ಪಿ ಅನುದಾನ) ಹಾಗೂ ರೂ. 3.5 ಕೋಟಿ ವೆಚ್ಚದಲ್ಲಿ ಹಾಸ್ಟಲ್ ಕಟ್ಟಡದ (ಎಸ್.ಡಿ.ಪಿ ಅನುದಾನ) ನಿರ್ಮಾಣ. ರೂ. 25 ಕೋಟಿ ವೆಚ್ಚದಲ್ಲಿ ತಳಬಾಳ ವಸತಿಯುಕ್ತ ಪದವಿ ಕಾಲೇಜಿನ ಕಟ್ಟಡದ ಶಂಕುಸ್ಥಾಪನೆ. ರೂ. 85 ಕೋಟಿ ವೆಚ್ಚದಲ್ಲಿ ತಳಕಲ್‍ನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಹಾಗೂ ಕೌಶಲ್ಯ ಅಭಿವೃದ್ಧಿ ಕೇಂದ್ರದ ಶಂಕುಸ್ಥಾಪನೆ. ರೂ. 48 ಕೋಟಿ ವೆಚ್ಚದಲ್ಲಿ ತಳಕಲ್‍ನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ 3ನೇ ಮಹಡಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ. ರೂ. 18.50 ಕೋಟಿ ವೆಚ್ಚದಲ್ಲಿ ಗುನ್ನಾಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡದ ಶಂಕುಸ್ಥಾಪನೆ. ರೂ. 4 ಕೋಟಿ ವೆಚ್ಚದಲ್ಲಿ ಕುಕನೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಶಂಕುಸ್ಥಾಪನೆ. ರೂ. 3.50 ಕೋಟಿ ವೆಚ್ಚದಲ್ಲಿ ತಳಕಲ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಶಂಕುಸ್ಥಾಪನೆ. ರೂ. 3.80 ಕೋಟಿ ವೆಚ್ಚದಲ್ಲಿ ಹಿರೇವಂಕಲಕುಂಟಾ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಶಂಕುಸ್ಥಾಪನೆ. ರೂ. 0.75 ಕೋಟಿ ವೆಚ್ಚದಲ್ಲಿ ಕುಕನೂರಿನಲ್ಲಿ ಭಗೀರಥ ಭವನದ ಶಂಕುಸ್ಥಾಪನೆ. ರೂ. 1 ಕೋಟಿ ವೆಚ್ಚದಲ್ಲಿ ಯಲಬುರ್ಗಾದಲ್ಲಿ ಮತ್ತು ರೂ. 1.10 ಕೋಟಿ ವೆಚ್ಚದಲ್ಲಿ ಕುಕನೂರು ಪಟ್ಟಣದಲ್ಲಿ ಕನಕ ಪುರಭವನಗಳ ಶಂಕುಸ್ಥಾಪನೆ. ರೂ. 1 ಕೋಟಿ ವೆಚ್ಚದಲ್ಲಿ ಯಲಬುರ್ಗಾದಲ್ಲಿ ವಾಲ್ಮೀಕಿ ಸಮುದಾಯ ಭವನದ ಶಂಕುಸ್ಥಾಪನೆ. ರೂ. 01 ಕೋಟಿ ವೆಚ್ಚದಲ್ಲಿ ಕುಕನೂರಿನಲ್ಲಿ ಅಂಬೇಡ್ಕರ್ ಭವನ ಹಾಗೂ ರೂ. 01 ಕೋಟಿ ವೆಚ್ಚದಲ್ಲಿ ಬಾಲ ಭವನದ ಶಂಕುಸ್ಥಾಪನೆ. ರೂ. 16 ಕೋಟಿ ವೆಚ್ಚದಲ್ಲಿ ರ್ಯಾವಣಕಿ ಗ್ರಾಮದಲ್ಲಿ ಇಂದಿರಾಗಾಂಧಿ ವಸತಿ ಶಾಲೆಯ ಶಂಕುಸ್ಥಾಪನೆ. ರೂ. 10.76 ಕೋಟಿ ವೆಚ್ಚದಲ್ಲಿ ಯಲಬುರ್ಗಾ ತಾಲೂಕಿನ ಮಂಗಳೂರಿನಲ್ಲಿ 100 ಕೆ.ವಿ ವಿದ್ಯುತ್ ಉಪ ಕೇಂದ್ರ ಹಾಗೂ ಸಂಬಂಧಪಟ್ಟ 110 ಕೆ.ವಿ ವಿದ್ಯುತ್ ಮಾರ್ಗ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ. 78 ಲಕ್ಷ ರೂ. ವೆಚ್ಚದಲ್ಲಿ ಯಲಬುರ್ಗಾ ನಗರದಲ್ಲಿ ಇಂದಿರಾ ಕ್ಯಾಂಟಿನ್‍ಗೆ ಶಂಕುಸ್ಥಾಪನೆ ನಡೆಯಲಿದೆ. ಮತ್ತು ಯಲಬುರ್ಗಾ ತಾಲೂಕಿನ “ಮುಖ್ಯ ಮಂತ್ರಿಗಳ ಅನಿಲಭಾಗ್ಯ ಯೋಜನೆ” ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಣೆ ಹಾಗೂ ವಿವಿಧ ಪಿಂಚಣಿ/ ಮಾಸಾಶನ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ವಿತರಣೆ ಕಾರ್ಯಕ್ರಮ ಜರುಗಲಿದೆ .

Please follow and like us:
error