ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮದಲ್ಲಿ ಬದಲಾವಣೆ

ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಡಿ. ೧೪ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಡಿ. ೧೪ ರಂದು ಬೀದರ್‌ನಿಂದ ವಿಶೇಷ ವಿಮಾನ ಮೂಲಕ ಹೊರಟು, ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳ ಜಿಲ್ಲೆ ಗಿಣಿಗೇರಾದ ಎಂಎಸ್‌ಪಿಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ರಸ್ತೆ ಮೂಲಕ ಬೆಳಿಗ್ಗೆ ೧೧-೧೫ ಗಂಟೆಗೆ ಕುಷ್ಟಗಿಗೆ ಆಗಮಿಸುವರು. ಕುಷ್ಟಗಿಯ ಟಿಎಪಿಎಂಎಸ್ ಆವರಣದಲ್ಲಿ ಪಕ್ಷದ ವತಿಯಿಂದ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಮಧ್ಯಾಹ್ನ ೧೨-೩೦ ಗಂಟೆಗೆ ಕನಕಗಿರಿಗೆ ತೆರಳುವರು. ಮಧ್ಯಾಹ್ನ ೧-೩೦ ಗಂಟೆಗೆ ಕನಕಗಿರಿಯ ಲಕ್ಷ್ಮೀದೇವಿ ಕೆರೆಗೆ ಭೇಟಿ ನೀಡಿ ಬಾಗಿನ ಅರ್ಪಿಸುವರು ನಂತರ ಕನಕಗಿರಿಯ ಎಪಿಎಂಸಿ ಆವರಣದ ಹಿಂಭಾಗದ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ ೩-೩೦ ಗಂಟೆಗೆ ಗಂಗಾವತಿಗೆ ತೆರಳಿ ಗಂಗಾವತಿಯಲ್ಲಿ ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ ೦೬ ಗಂಟೆಗೆ ಬಳ್ಳಾರಿ ಜಿಲ್ಲೆ ಹೊಸಪೇಟೆಯ ವೈಕುಂಠ ಅತಿಥಿ ಗೃಹಕ್ಕೆ ತೆರಳಿ ವಾಸ್ತವ್ಯ ಮಾಡುವರು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.