ಮೌಲನಾ ಅಜಾದ್ ಶಾಲೆ ಶಿಕ್ಷಕರ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿ : ಹೆಸರು ನೊಂದಾಯಿಸಿ

ಕೊಪ್ಪಳ ಡಿ.  : ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸ್ಟಡಿ ಸರ್ಕಲ್ ಯೋಜನೆಯಡಿ ಮೌಲನಾ ಅಜಾದ್ ಮಾದರಿ ಶಾಲೆಗಳಲ್ಲಿನ ಮುಖ್ಯೋಪಧ್ಯಾಯರು ಹಾಗೂ ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿಗಾಗಿ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಭಾಗವಹಿಸಲಿಚ್ಛಿಸುವರು ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಿ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸ್ಟಡಿ ಸರ್ಕಲ್ ಯೋಜನೆಯಡಿ ಕರ್ನಾಟಕ ಲೋಕಸೇವಾ ಆಯೋಗ ಬೆಂಗಳೂರು, ರವರು ಅಧಿಸೂಚಿಸಿರುವ ಅಲ್ಪ ಸಂಖ್ಯಾತರ ಇಲಾಖೆಯ ಮೌಲನಾ ಅಜಾದ್ ಮಾದರಿ ಶಾಲೆಗಳಲ್ಲಿನ ಮುಖ್ಯೋಪಧ್ಯಾಯರು ಹಾಗೂ ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ೨೦೧೯ರ ಜನವರಿ. ೦೧ ರಿಂದ ೧೧ ರವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತು ಪಡಿಸಿ-೧೦ ದಿನಗಳು) ಆಯೋಜಿಸಲಾಗಿದ್ದು, ಈ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮಕ್ಕೆ ಭಾಗವಹಿಸಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳದಲ್ಲಿ ತಮ್ಮ ಹೆಸರನ್ನು ಡಿ. ೩೧ ರೊಳಗೆ ನೊಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೫೩೯-೨೨೦೮೫೯, ೯೧೧೩೯೨೨೯೪೯, ೭೦೧೯೭೬೯೨೮೧ಕ್ಕೆ ಸಂಪರ್ಕಿಸಬಹುದು. ಆಸಕ್ತರು ಈ ತರಬೇತಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ   ತಿಳಿಸಿದ್ದಾರೆ

Please follow and like us:
error