You are here
Home > Koppal News > ಮೌಲಾನಾ ಅಜಾದ ಮಾದರಿ ಶಾಲೆ ಪ್ರಾರಂಭ : ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಮೌಲಾನಾ ಅಜಾದ ಮಾದರಿ ಶಾಲೆ ಪ್ರಾರಂಭ : ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಮಂಜೂರಾಗಿರುವ ವಸತಿ ರಹಿತ ಅಲ್ಪಸಂಖ್ಯಾತರ ಮೌಲಾನಾ ಆಜಾದ ಮಾದರಿ (ಆಂಗ್ಲ ಮಾಧ್ಯಮ) ಶಾಲೆಗಳನ್ನು ಕೊಪ್ಪಳ, ಗಂಗಾವತಿ ಹಾಗೂ ಯಲಬುರ್ಗಾದಲ್ಲಿ ಪ್ರಾರಂಭಿಸಲಾಗುತ್ತಿದ್ದು, ೬ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ೫ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ೧ ಲಕ್ಷ ರೂ. ಗಳಿಗೆ ಮೀರಿರಬಾರದು. ಪ್ರತಿ ಶಾಲೆಯಲ್ಲಿ ೬೦ ಆಸನಗಳನ್ನು ನಿಗದಿ ಪಡಿಸಲಾಗಿದ್ದು, ಶೇ.೭೫ ಸ್ಥಾನಗಳನ್ನು ಅಲ್ಪಸಂಖ್ಯಾತರು ಹಾಗೂ ಶೇ.೨೫ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಅಂಗವಿಕಲ ವಿದ್ಯಾರ್ಥಿಗಳು, ವಿಶೇಷ ಗುಂಪಿಗೆ ಸೇರಿದ ಅನಾಥ ಮಕ್ಕಳು, ವಿಧವೆಯರ ಮಕ್ಕಳು, ಪೌರ ಕಾರ್ಮಿಕರ ಮಕ್ಕಳು, ಇತ್ಯಾದಿಗಳಿಗೆ ಶೇ. ೦೩ ಸ್ಥಾನಗಳನ್ನು ಕಾಯ್ದಿರಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ದೃಢೀಕರಿಸಿದ ಪ್ರಮಾಣ ಪತ್ರ, ಹಿಂದಿನ ತರಗತಿಯಲ್ಲಿ ಉತ್ತೀರ್ಣರಾದ ಅಂಕ ಪಟ್ಟಿಯ ದೃಢೀಕೃತ ಪ್ರತಿ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ ಹಾಗೂ ವಿದ್ಯಾರ್ಥಿ ಪಾಸ್ ಪೊರ್ಟ್ ಅಳತೆಯ ಇತ್ತೀಚಿನ ೨ ಭಾವಚಿತ್ರಗಳೊಂದಿಗೆ ಜುಲೈ. ೨೫ ರೊಳಗಾಗಿ ಸಂಬಂಧ ಪಟ್ಟ ಅಲ್ಪ ಸಂಖ್ಯಾತರ ತಾಲೂಕ ಮಾಹಿತಿ ಕೇಂದ್ರ, ಅಥವಾ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ದೂರವಾಣಿ ಸಂಖ್ಯೆ ೦೮೫೩೯-೨೨೫೦೭೦ ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮೂದ್   ತಿಳಿಸಿದ್ದಾರೆ.

Leave a Reply

Top