ಕೊಪ್ಪಳ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿವರ್ಷ ಕೊಡಮಾಡುವ ಈ ಸಾಲಿನ ೨೦೧೮ರ ಸಾಂಘಿಕ ಪ್ರಶಸ್ತಿಗೆ ರಾಜ್ಯದ ೧೨ ಜನ ಪತ್ರಕರ್ತರನ್ನುಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಎನ್.ರಾಜು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈ ಬಾರಿ ಕೊಪ್ಪಳ ಜಿಲ್ಲೆಯಿಂದ ಕಾರ್ಯನಿರತ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಘಟಕದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಹಾಗೂ ಸುದಿನ ಕನ್ನಡ ದಿನಪತ್ರಿಕೆಯ ಸ್ಥಾನಿಕ ಸಂಪಾದಕರಾದ ಹರೀಶ ಎಚ್.ಎಸ್ ಇವರು ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಸಾಂಘಿಕ ಪ್ರಶಸ್ತಿಯನ್ನು ಇದೇ ಜನೇವರಿ ೨೦ ಹಾಗೂ ೨೧ ರಂದು ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ನಡೆಯಲಿರುವ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ೩೩ನೇ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.
ಹರ್ಷ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಘಟಕದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಸ್ನೇಹ ಬಳಗ ಹರೀಶ ಎಚ್.ಎಸ್ ಕೊಪ್ಪಳ ಜಿಲ್ಲೆಯಿಂದ ಈ ಬಾರಿ ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಕ್ಕೆ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ರಾಜ್ಯ ಮಟ್ಟದ ಸಾಂಘಿಕ ಪ್ರಶಸ್ತಿಗೆ ಕೊಪ್ಪಳದ ಪತ್ರಕರ್ತ ಹರೀಶ ಎಚ್.ಎಸ್ ಆಯ್ಕೆ
Please follow and like us: