ರಾಷ್ಟ್ರೀಯ ಏಕತಾ ಓಟಕ್ಕೆ ಪ್ರಮುಖ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗೈರು – ಸಂಸದ ಸಂಗಣ್ಣ ಕರಡಿ ಅಸಮಾಧಾನ

ಕೊಪ್ಪಳ : ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜನ್ಮ ದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಮಂಗಳವಾರ ಕೊಪ್ಪಳದ ನಗರದ ಗಡಿಯಾರ ಕಂಬದ ಬಳಿಯಿಂದ ಪ್ರಾರಂಭಿಸಲಾದ ರಾಷ್ಟ್ರೀಯ ಏಕತಾ ಓಟದಲ್ಲಿ ಸಂಸದ ಕರಡಿ ಸಂಗಣ್ಣ ಅವರು ಉತ್ಸಾಹದಿಂದ ಖುದ್ದು ಪಾಲ್ಗೊಂಡಿದ್ದರು. ಆದರೆ, ಜಿಲ್ಲಾಡಳಿತದ ಪ್ರಮುಖರು ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಏಕತಾ ಓಟಕ್ಕೆ ಗೈರು ಹಾಜರಾಗುವ ಮೂಲಕ ದೇಶದ ಒಬ್ಬ ಮಹಾನ್ ವ್ಯಕ್ತಿ ಸರ್ದಾರ್ ವಲ್ಲಭ ಭಾಯಿ ಪಟೇಲ್‌ರಿಗೆ ಅಪಮಾನ ಮಾಡಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಅಸಮಾಧಾನ ವ್ಯಕ್ತ ಪಡಿಸಿದರು.

ಇದು ಜಿಲ್ಲಾಡಳಿತ ಕಾಟಾಚಾರಕ್ಕೆ ಹಮ್ಮಿಕೊಂಡಿದ್ದ ಓಟ ಎಂಬಂತೆ ಇತ್ತು. ಏಕತಾ ಓಟದ ಕುರಿತು ಜಿಲ್ಲೆಯಲ್ಲಿ ಜಾಗೃತಿ ಕೆಲಸ ವಾಗಬೇಕಿತ್ತು. ಜಿಲ್ಲಾಡಳಿತ ಈ ವಿಷಯದಲ್ಲಿ ಸಂಪೂರ್ಣ ನಿರ್ಲಕ್ಷ ವಹಿಸಿದೆ ಎಂದು ಅವರು ಆರೋಪಿಸಿದರು.

Please follow and like us:
error