You are here
Home > Koppal News > ರಾಷ್ಟ್ರೀಯ ಸಂಕಲ್ಪ ದಿವಸ : ಅ. 31 ರಂದು ಕೊಪ್ಪಳದಲ್ಲಿ ಪ್ರಮಾಣ ವಚನ ಸ್ವೀಕಾರ

ರಾಷ್ಟ್ರೀಯ ಸಂಕಲ್ಪ ದಿವಸ : ಅ. 31 ರಂದು ಕೊಪ್ಪಳದಲ್ಲಿ ಪ್ರಮಾಣ ವಚನ ಸ್ವೀಕಾರ

ಕೊಪ್ಪಳ ಅ. : ರಾಷ್ಟ್ರೀಯ ಸಂಕಲ್ಪ ದಿವಸ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿ ಕಾರ್ಯಾಲಯದ ವತಿಯಿಂದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಅ. 31 ರಂದು ಬೆಳಿಗ್ಗೆ 9 ಗಂಟೆಗೆ ನಗರದ ತಹಶೀಲ್ದಾರ ಕಛೇರಿ ಪಕ್ಕದ ಪೊಲೀಸ್ ಕವಾಯತ್ ಮೈದಾನದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಕೆ. ರಾಘವೇಂದ್ರ ಹಿಟ್ನಾಳ್, ಅಮರೇಗೌಡ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್ ಪಾಲ್ಗೊಳ್ಳುವರು. ಎಲ್ಲಾ ಇಲಾಖೆಗಳ ಅಧಿಕಾರಿಗಳು/ ಮುಖ್ಯಸ್ಥರು ಈ ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ಕೊಪ್ಪಳ ಅಪರ ಜಿಲ್ಲಾಧಿಕರಿ ಸಿ.ಡಿ ಗೀತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===

Top