You are here
Home > Koppal News > ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನಾ ಸಭೆ

ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ ಡಿ. :  ದೆಹಲಿಯ ರಾಷ್ಟೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಜಗದೀಶ ಹಿರೇಮನಿ ಅವರು ಕೊಪ್ಪಳ ಜಿಲ್ಲೆಯಲ್ಲಿ  ಒಂದು ದಿನದ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಜಗದೀಶ ಹಿರೇಮನಿ  ಜಿಲ್ಲಾಧಿಕಾರಿ ಕಚೇರಿ ಸಂಭಾಂಗಣದಲ್ಲಿ ಸಫಾಯಿ ಕರ್ಮಚಾರಿಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕಾರ್ಯಕ್ರಮ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನಾ ಸಭೆ ಸಫಾಯಿ ಕರ್ಮಚಾರಿಗಳು ಮತ್ತು ಅವರ ಅವಲಂಬಿತ ಕುಟುಂಬದವರೊಂದಿಗೆ ಸಮಾಲೋಚನೆ ಮತ್ತು ಆಯುಕ್ತರು, ನಗರಸಭೆ ಕೊಪ್ಪಳ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸುವರು ನಡೆಸಿದರು.

 

ಮ್ಯಾನುವೆಲ್ ಸ್ಕ್ಯಾವೆಂಜಿಂಗ್ : ರೂ. 40 ಸಾವಿರ ಪರಿಹಾರ ಧನ
ಸಂಬಂಧಿಸಿದ ಸಂತ್ರಸ್ತ ಕುಟುಂಬದ ಮಾಹಿತಿ ಶೀಘ್ರ ನೀಡಿ : ಜಗದೀಶ ಹಿರೇಮನಿ
ಮ್ಯಾನುವೇಲ್ ಸ್ಕ್ಯಾವೆಂಜಿಂಗ್ ಪದ್ಧತಿಯಲ್ಲಿ ಒಳಪಟ್ಟಿರುವ ಸಂತ್ರಸ್ತ ಸಫಾಯಿ ಕರ್ಮಚಾರಿಗಳಿಗೆ ಕೇಂದ್ರ ಸರ್ಕಾರವು ರೂ. 40 ಸಾವಿರ ಪರಿಹಾರ ಧನವನ್ನು ಒದಗಿಸುತ್ತಿದ್ದು, ಅಂತಹ ಸಂತ್ರಸ್ತ ಕುಟುಂಬದ ಮಾಹಿತಿಯನ್ನು ಶೀಘ್ರ ನೀಡುವಂತೆ ದೆಹಲಿಯ ರಾಷ್ಟೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಜಗದೀಶ ಹಿರೇಮನಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನಿಡಿದರು.
ಸಫಾಯಿ ಕರ್ಮಚಾರಿಗಳ ಕಾರ್ಯಕ್ರಮ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಂಭಾಂಗಣದಲ್ಲಿ ಶನಿವಾರದಂದು ಆಯೋಜಿಸಲಾದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರಸಭೆ, ಪುರಸಭೆ, ಪಟ್ಟಣ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಕಛೇರಿಗಳಲ್ಲಿ ಶೌಚಾಲಯಗಳನ್ನು ಶುಚಿಗೋಳಿಸುತ್ತಿರುವವರು ಸಫಾಯಿ ಕರ್ಮಚಾರಿಗಳು.  ಕೇಂದ್ರ ಸರ್ಕಾರವು ನ್ಯಾಯಾಲಯದ ನಿರ್ದೇಶನದಂತೆ ಎಲ್ಲಾ ಕಾರ್ಮಿಕರಿಗೆ ಮತ್ತು ಸಫಾಯಿ ಕರ್ಮಚಾರಿಗಳಿಗೆ 2013ರ ಕಾಯ್ದೆ ಪ್ರಕಾರ ಕನಿಷ್ಠ ವೇತನವನ್ನು ಜಾರಿಗೊಳಿಸಲಾಗಿದ್ದು, ಕಡ್ಡಾಯವಾಗಿ ಅವರಿಗೆ ಕನಿಷ್ಠ ವೇತನವನ್ನು ನೀಡಬೇಕು.  ಪಿ.ಎಫ್ ಇ.ಎಸ್.ಐ ಕಡಿತಗೊಳ್ಳುತ್ತಿರುವ ಖಾತ್ರಿ ಕುರಿತು ಅದರ ನಂಬರ್ ಮತ್ತು ಅಗತ್ಯ ದಾಖಲೆಗಳನ್ನು ಅವರಿಗೆ ನೀಡಬೇಕು.  ಕಾರ್ಮಿಕಾಧಿಕಾರಿಗಳು ಪೌರಕಾರ್ಮಿಕರ ಸ್ಥಳಗಳಿಗೆ ಭೇಟಿ ನೀಡಿ, ಅವರಿಗೆ 2013ರ ಕಾಯ್ದೆ ಪ್ರಕಾರ ವೇತನ ನೀಡಲಾಗುತ್ತಿದೆ ಇಲ್ಲ ಎಂಬುದರ ಕುರಿತು ಪರಿಶೀಲಿಸಿ ಜಿಲ್ಲಾಧಿಕಾರಿಗೆ ವರದಿಯನ್ನು ಸಲ್ಲಿಸಬೇಕು.  ಸಫಾಯಿ ಕರ್ಮಚಾರಿಗಳಿ ಸಂಬಂದಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಆರೋಗ್ಯ ತಪಾಸಣೆ ನಡೆಸಬೇಕು.  ಇದರ ಜೊತೆ ಉಪಹಾರ, ವಾರ್ಷಿಕ ಎರಡು ಜೊತೆ ಬಟ್ಟೆ, ಹ್ಯಂಡ್ ಗ್ಲವಜ್, ಶೂ ಗಳನ್ನು ಅವರ ಆರೋಗ್ಯದ ಹಿತದೃಷ್ಟಿಯಿಂದ ಇತ್ಯಾದಿ ವ್ಯವಸ್ಥೆಗಳನ್ನು ಕಲ್ಪಿಸಬೇಕು.  ಸಫಾಯಿ ಕಾರ್ಮಚಾರಿಗಳ ಆರೋಗ್ಯದ ಬಗ್ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು.  ರಾಷ್ಟ್ರೀಯ ಹಾಗೂ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗಗಳು ಸಫಾಯಿಕರ್ಮಚಾರಿಗಳಿಗಾಗಿ ನಿಯಮಿತ ಅವಧಿಯೊಳಗೆ ವೇತನ, ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇನ್ಸುರೆನ್ಸ್ ಮಾಡಿಸುವುದು, ಸ್ವಂತ ಮನೆ, ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯವನ್ನು ಒದಗಿಸುವ ಉದ್ದೇಶವನ್ನು ಹೊಂದಿದ್ದು, ಈ ಉದ್ದೇಶಗಳನ್ನು ಸಫಾಯಿ ಕರ್ಮಚಾರಿಗಳಿಗೆ ತಲುಪಿಸಲು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.  ಶಿಕ್ಷಣಕ್ಕಾಗಿ ಆಯ್ದಿರಿಸಿದ ಅನುಧಾನದಲ್ಲಿ ಪೌರಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ, ಲ್ಯಾಪ್‍ಟ್ಯಾಬಗಳನ್ನು ನೀಡಬೇಕು.  ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. ಒಂದು ಲಕ್ಷದಿಂದ 25 ಲಕ್ಷದವರೆಗೆ ಸಾಲ ಸೌಲಭ್ಯವನ್ನು ಒದಗಿಸಲಾಗಿದೆ.  ಇದಲ್ಲದೇ ಅನೇಕ ಸೌಲಭ್ಯಗಳನ್ನು ಆಯೋಗವು ಒದಗಿಸುತ್ತಿದ್ದು, ಇದರ ಬಗ್ಗೆ ಮಾಹಿತಿ ಕೊರತೆ ಇದೆ.  ಈ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರದಲ್ಲಿ ಪೌರಕಾರ್ಮಿಕರ ಮತ್ತು ಅವರ ಕುಟುಂಬದ ಎಲ್ಲ ಸದಸ್ಯರಿಗಾಗಿ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಬೇಕು.  ಸಫಾಯಿ ಕರ್ಮಚಾರಿಗಳು ಸಮಾಜದ ಮುಖ್ಯ ವಾಹಿನಿಗೆ ಬರಬೇಕಾಗಿದ್ದು, ಸರ್ಕಾರದ ಸವಲತ್ತುಗಳನ್ನು ಅವರಿಗೆ ಸಮರ್ಪಕವಾಗಿ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಷ್ಟೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಜಗದೀಶ ಹಿರೇಮನಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನಿಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ, ಜಿಲ್ಲಾ ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಗಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ತಹಶೀಲ್ದಾರ ಜೆ.ಬಿ. ಮಜ್ಗಿ, ಸಮಾಜ ಕಲ್ಯಾಣ ಇಲಾಖೆ ಉಪನಿದೇರ್ಶಕ ಬಿ. ಕಲ್ಲೇಶ, ಸಫಾಯಿ ಕರ್ಮಚಾರಿಗಳ ಸಮಿತಿ ಸದಸ್ಯರಾದ ಲಕ್ಷ್ಮಣ ಬಾರಿಗಿಡದ, ಮರಿಯಮ್ಮ ಚಲವಾದಿ ಹಾಗೂ ದುರಗಪ್ಪ ಸೇರಿದಂತೆ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Top