ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಸಂಭ್ರಮಾಚರಣೆ

Koppal News ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯ, ಕೊಪ್ಪಳದ ರಾಷ್ಟ್ರೀಯ ಸೇವಾ ಯೋಜನಾ ಘಟಕದವತಿಯಿಂದ೨೪.ರಂದು ರಾಷ್ಟ್ರೀಯ ಸೇವಾ ಯೋಜನೆಯ ಸ್ಥಾಪನೆಯ ಸುವರ್ಣ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮಂಜುನಾಥ ಹಾಗೂ ಶರಣಪ್ಪರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು ಸ್ವಾಗತ ಮತ್ತು ಪ್ರಸ್ತಾವಿಕವಾಗಿ ಮಾರುತಿಯವರು ಮಾತನಾಡಿದವರು.
ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರೀಯ ಸೇವಾ ಯೋಜನಾಧಿಕರಿಯಗಳಾದ ಪ್ರೊ. ಶರಣಪ್ಪ ಬಿಳೆಯಲಿ, ರಾಷ್ಟ್ರೀಯ ಯೋಜನೆಯ ಪ್ರಮುಖ ಉದ್ದೇಶ ಸಮುದಾಯದ ಸೇವೆಯೊಂದಿಗೆ ವ್ಯಕ್ತಿತ್ವ ವಿಕಸನವಾಗಿದೆ, ಯುವಜನತೆಗೆ ಗ್ರಾಮೀಣ ಸಮುದಾಯದ ಸೇವೆಯ ಮಹತ್ವವನ್ನು ವಿವರಿಸುತ್ತಾ, ಗ್ರಾಮೀಣ ಸಮಸ್ಯೆಗಳನ್ನು ಬಗೆಹರಿಸುತ್ತಾ ಯುವಜನತೆ ತಮ್ಮ ವ್ಯಕ್ತತ್ವವನ್ನು ವಿಕಸಿತಗೊಳಿಸಕೊಂಡು ನಾಯಕರಾಗಿ ನಿರ್ಮಾಣ ಮಾಡುವುದು ರಾಷ್ಟ್ರೀಯ ಸೇವಾ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ರಾಷ್ಟ್ರೀಯ ಸೇವಾ ಯೋಜನೆ ೧೯೬೯, ಸೆಪ್ಟೆಂಬರ್ ೨೪ ರಂದು ಮಹಾತ್ಮಾ ಗಾಂಧೀಜಿಯವರ ಜನ್ಮ ಶತಮಾನೋತ್ಸವದ ಸವಿನೆನಪಿಗಾಗಿ ಪ್ರಧಾನಿ ಲಾಲಬಹಾದ್ದೂರಶಾಸ್ತ್ರಿಯವರು ಪ್ರಧಾನಿಯಾಗಿರುವ ಸಂದರ್ಭದಲ್ಲಿ ಜಾರಿಗೊಳಿಸಲಾಯಿತು. ಪ್ರಸ್ತುತ ವರ್ಷ ರಾಷ್ಟ್ರೀಯ ಸೇವಾ ಯೋಜನೆಯ ಸಂಭ್ರಮಾಚರಣೆ ವರ್ಷವಾಗಿರುವದರಿಂದ ವರ್ಷವಿಡೀ ರಾಷ್ಟ್ರದ ಎಲ್ಲ ಮಹಾವಿದ್ಯಾಲಯಗಳಲ್ಲಿ ಸ್ವಚ್ಛ ಹಿ ಸೇವಾ (ಸ್ವಚ್ಛತೆಯೇ ಸೇವೆ) ಎನ್ನುವ ಘೋಷವಾಕ್ಯದೊಂದಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಯುವ ಆಭಿಯಾನ ಪ್ರಾರಂಭಿಸಲಾಗಿದೆ ಎಂದು ವಿವರಿಸಿದರು.
ಕಾರ್ಯಕ್ರಮದ ಇನ್ನೋರ್ವ ಅತಿಥಿಗಳಾದ ಡಾ. ಸಿದ್ಧಲಿಂಗಪ್ಪ ಕೊಟ್ನೆಕಲ್, ಪದವಿ ಪೂರ್ವ ಪ್ರಾಚಾರ್ಯರು ಇವರು ಮಾತನಾಡುತ್ತ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಹಜೀವನ, ಸಹಬಾಳ್ವೆ, ನಾಯಕತ್ವ ಗುಣ, ಸಮಾಜಮುಖಿ ಜೀವನದ ಮಹತ್ವವನ್ನು ವಿವರಿಸುವದರೊಂದಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿದರೆ ಮಾತ್ರ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜಶಾಸ್ತ್ರದ ಪ್ರಾಧ್ಯಾಪಕರಾದ ಶಿವನಗೌಡ ಪಾಟೀಲರವರು ಮಾತನಾಡುತ್ತ ವಿದ್ಯಾರ್ಥಿಗಳು ಹೊಸ ಹೊಸ ವಿಚಾರಗಳನ್ನು ಬೆಳೆಸಿಕೊಂಡರೆ ಮಾತ್ರ ವ್ಯಕ್ತಿತ್ವ ವಿಕಸನವಾಗುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಸೇರುವದರಿಂದ ಸಮಾಜದಲ್ಲಿನ ಸಮಸ್ಯೆಗಳು ಹಾಗೂ ಹೊಸ ವಿಚಾರಗಳನ್ನು ಅರಿತುಕೊಳ್ಳಬಹುದೆಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಗಳಾಗಿ ಭಾಗವಹಿಸಿದ ಪ್ರಾಧ್ಯಾಪಕರಾದ ಮಹಮ್ಮದ ಶಫಿ ಸರದಾರ ಇವರು ಸಮಾಜ ಪ್ರಗತಿಯಾಗುತ್ತಿದ್ದರೂ ಸಮಸ್ಯೆಗಳು ಜೀವಂತವಾಗಿವೆ. ಸಮಾಜ ಬೆಳೆದಂತೆ ಹೊಸ ಹೊಸ ಸಮಸ್ಯೆಗಳು ಉದ್ಭವಿಸುತ್ತಿವೆ. ಇಂತಹ ಸಮಸ್ಯೆಗಳನ್ನು ಪೂರ್ಣವಾಗಿ ಬಗೆ ಹರಿಸಲು ಯುವಜನತೆ ಸಿದ್ಧರಾಗಬೇಕು ಅಂತಹ ಯುವಜನತೆ ನಿರ್ಮಾಣ ಮಾಡಲು ರಾಷ್ಟ್ರೀಯ ಸೇವಾ ಯೋಜನೆ ಸೂಕ್ತವಾದ ವೇದಿಕೆಯಾಗಿದೆ ಎಂದರು.
ವಿದ್ಯಾರ್ಥಿಗಳಾದ ಶ್ರೀಶೈಲ, ವೀರಭದ್ರ, ಮಂಜುನಾಥ, ಮಾರುತಿ, ಚಂದ್ರಶೇಖರರವರು ತಮ್ಮ ರಾಷ್ಟ್ರೀಯ ಸೇವಾ ಯೋಜನೆಯ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

Please follow and like us:
error