ರೂ.೭.೦೦ ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕರಿಂದ ಭೂಮಿ ಪೂಜೆ

ಕೊಪ್ಪಳ:೨೨ ಗೊಂಡಬಾಳ ಜಿಲ್ಲಾ ಪಂಚಾಯತಿಯ ಗ್ರಾಮಗಳಾದ ಮುದ್ದಾಬಳ್ಳಿ ಹಾಗೂ ಗೊಂಡಬಾಳ ಗ್ರಾಮಗಳಲ್ಲಿ ವಿವಿಧ ಯೋಜನೆಯಡಿಯಲ್ಲಿ ಅಂದಾಜು ಮೊತ್ತು ರೂ.೩.೦೦ ಕೋಟಿಯ ರಸ್ತೆ ಕಾಮಗಾರಿ, ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದ ಹತ್ತಿರ ಕಲ್ಮಲಾ-ಶಿಗ್ಗಾಂವ (ಎಸ್.ಹೆಚ್.೨೩) ೫೦೫೪ ಯೋಜನೆಯಡಿಯಲ್ಲಿ ರೂ.೪.೦೦ ಕೋಟಿಯ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಬಳಿಕ ಮಾತನಾಡಿದ ಶಾಸಕ ಕೆ.ರಾಘವೇಂದ್ರ ಹಿಟ್ನಾಳರವರು ಕೊಪ್ಪಳ ಕ್ಷೇತ್ರದ ಪ್ರತಿ ಗ್ರಾಮಕ್ಕೂ ರೂ.೫.೦೦ ಕೊಟಿಯಿಂದ ಸುಮಾರು ರೂ.೨೦.೦೦ ಕೋಟಿಯವರೆಗೂ ಅನುದಾನ ಕಲ್ಪಿಸಿ ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಬರುವ ಆರ್ಥಿಕ ವರ್ಷದಲ್ಲಿ ಸರಕಾರದಿಂದ ಸುಮಾರು ರೂ.೧೦೦೦ ಕೋಟಿ ಅನುದಾನ ಮಂಜೂರು ಮಾಡಿಸಿ ಗ್ರಾಮಗಳ ಜೊತೆಗೆ ಕೊಪ್ಪಳ ನಗರದ ಅಭಿವೃದ್ಧಿಗೆ ಹೆಚ್ಚು ಒತ್ತುಕೊಟ್ಟು ಗ್ರಾಮದ ಸೌಂದರ್ಯಕರಣ ಹೆಚ್ಚಿಸಲಾಗುವುದು. ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದ್ದು ಈ ಬಾರಿ ಕ್ಷೇತ್ರದಲ್ಲಿ ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವುದಿಲ್ಲ. ಪ್ರತಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ ಜನರ ಆರೋಗ್ಯ ಹಿತ ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರಕ್ಕೆ ಈ ಆರುವರೆ ವರ್ಷದಲ್ಲಿ ಕ್ಷೇತ್ರಕ್ಕೆ ಹೆಚ್ಚು ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಕಾರ್ಯಗಳ ಪರ್ವವೇ ಸೃಷ್ಟಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಗೂಳಪ್ಪ ಹಲಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಭೂಮರಡ್ಡಿ, ಕೆ.ಓ.ಎಫ್. ಅಧ್ಯಕ್ಷ ಸುರೇಶರಡ್ಡಿ ಮಾಡಿನೂರ, ತಾ.ಪಂ.ಅಧ್ಯಕ್ಷ ಬಾಲಚಂದ್ರನ್, ತಾ.ಪಂ.ಸದಸ್ಯ ರಾಜೀವರಡ್ಡಿ, ನಿಂಗಪ್ಪ ಯತ್ನಟ್ಟಿ, ನಗರಸಭಾ ಸದಸ್ಯ ಅಕ್ಬರ್ ಪಾಷಾ ಪಲ್ಟನ್, ಮುಖಂಡರುಗಳಾದ ಬಸವರಡ್ಡೆಪ್ಪ ಹಳ್ಳಿಕೇರಿ, ಪ್ರಸನ್ನ ಗಡಾದ, ನವೋದಯ ವಿರುಪಣ್ಣ, ಕೇಶವರಡ್ಡಿ, ಕೃಷ್ಣಾರಡ್ಡಿ ಗಲಿಬಿ, ಶರಣಪ್ಪ ಸಜ್ಜನ್, ಹನುಮೇಶ ಹೊಸಳ್ಳಿ, ಶಿವಕುಮಾರ, ಎಂ.ಡಿ.ಜಹೀರ ಅಲಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ ರಡ್ಡಿ, ಲೋಕೋಪಯೋಗಿ ಇಲಾಖೆಯ ಅಭಿಯಂತರರು, ಗುತ್ತಿಗೆದಾರರು ಹಾಗೂ ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.

Please follow and like us:
error