ರೈತರಿಗೆ “ಪ್ರಧಾನ ಮಂತ್ರಿ ಕಿಸಾನ ಸಮ್ಮಾನ್ ನಿಧಿ” ಯೋಜನೆಯ ಮಾಹಿತಿ ನೀಡಿ : ಪಿ ಸುನೀಲ್ ಕುಮಾರ

ಕೊಪ್ಪಳ ಫೆ. ೆ): ಕೊಪ್ಪಳ ಜಿಲ್ಲೆಯ ರೈತರಿಗೆ “ಪ್ರಧಾನ ಮಂತ್ರಿ ಕಿಸಾನ ಸಮ್ಮಾನ್ ನಿಧಿ” ಯೋಜನೆಯ ಕುರಿತು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಅವರು ಸಂಬಂಧಿಸಿದ ಇಲಾಖಾ ಅಧಿಕಾರಿಗಳೆ ಹಾಗೂ ತಹಶೀಲ್ದಾರರಿಗೆ ಸೂಚನೆ ನೀಡಿದರು.
“ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ” ಯೋಜನೆ ಅನುಷ್ಠಾನಗೊಳಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು “ಪ್ರಧಾನ ಮಂತ್ರಿ ಕಿಸಾನ ಸಮ್ಮಾನ್ ನಿಧಿ” ಎಂಬ ಹೊಸಯೋಜನೆಯನ್ನು ಘೋಷಿಸಿದ್ದು, ಜಿಲ್ಲೆಯಲ್ಲಿನ ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರು, ಈ ಯೋಜನೆಯಡಿ ಎರಡು ಹೆಕ್ಟೇರಿಗಿಂತ ಕಡಿಮೆ ಭೂ ಒಡೆತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ ಮೂರು ಕಂತುಗಳಲ್ಲಿ ವಾರ್ಷಿಕ ಒಟ್ಟು 6000 ರೂ.ಗಳನ್ನು ನೀಡಲು ಉದ್ದೇಶಿಸಿದೆ. ಆದ್ದರಿಂದ ಜಿಲ್ಲೆಯ ಅರ್ಹ ಸಣ್ಣ ಮತ್ತು ಅತಿ ಸಣ್ಣ ರೈತರ ಪಟ್ಟಿಗಳನ್ನು ಆಯಾ ಗ್ರಾಮ ಪಂಚಾಯತಿಗಳಲ್ಲಿ ಶೀಘ್ರವಾಗಿ ಪ್ರಕಟಿಸಲಾಗುವುದು. ಈ ಸಂಭಾವ್ಯ ಅರ್ಹ ರೈತರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಂಡಿರು ಸಣ್ಣ ಮತ್ತು ಅತಿ ಸಣ್ಣ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಅಥವಾ ಬಾಪೂಜಿ ಸೇವಾ ಕೇಂದ್ರ, ಅಟಲ್ ಜೀ ಜನಸ್ನೇಹಿ ಕೇಂದ್ರ ಅಥವಾ ಸರ್ಕಾರಿ ಸೇವಾ ಕೇಂದ್ರಗಳಲ್ಲಿ ತೆರಳಿ ಅನುಬಂಧ (ಸಿ)ಯಲ್ಲಿ ಹೆಸರು, ಆಧಾರ್ ಸಂಖ್ಯೆ, ಜಮೀನಿನ ವಿವರ, ಮುಂತಾದ ವಿವರಗಳನ್ನು ಸಮೂದಿಸಿ ಸ್ವಯಂ ಘೋóಷಣೆಯನ್ನು ಪ್ರಕಟಿಸಬೇಕಾಗಿದ್ದು, ಈ ಕುರಿತು ರೈತರಿಗೆ ಅಗತ್ಯ ಮಾಹಿತಿ ನೀಡಬೇಕು. ಯೋಜನೆಯ ಬಗ್ಗೆ ವಿಶೇಷವಾಗಿ ಪ್ರಚಾರ ಮಾಡಬೇಕು. ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಗುರುತಿಸಿ, ಯೋಜನೆಯ ಬಗ್ಗೆ ಅವರಿಗೆ ಆದಷ್ಟು ಬೇಗ ಮಾಹಿತಿ ನೀಡಲು ಗ್ರಾಮ ಲೆಕ್ಕಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಅಲ್ಲದೇ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಿ, ಕೃಷಿ ಇಲಾಖೆಗೆ ವರದಿ ಸಲ್ಲಿಸಲಿ. ಪ್ರಧಾನ ಮಂತ್ರಿ ಕಿಸಾನ ಸಮ್ಮಾನ್ ನಿಧಿ ಯೋಜನೆಯ ಸದುಪಯೋಪಗವನ್ನು ರೈತರಿಗೆ ತಲುಪುವಂತೆ ಎಲ್ಲಾರೂ ಪ್ರಾಮಾಣಿಕವಾಗಿ ಪ್ರಯತ್ನಿಸಿ. ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ, ಜಂಟಿ ಕೃಷಿ ನಿರ್ದೇಶಕರಾದ ಶಬಾನ ಶೇಖ್, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ತಹಶೀಲ್ದಾರರಾದ ಜೆ.ಬಿ. ಮಜ್ಗಿ, ರಮೇಶ ಅಳವಂಡಿಕರ್, ವಿರೇಶ ಬಿರಾದರ, ಗುರುಬಸವರಾಜ ಸೇರಿದಂತೆ ಕಂದಾಯ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error