ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ  ಕರವೇ ಪ್ರತಿಭಟನೆ

 ರಾಜ್ಯ 

ಕಾಂಗ್ರೆಸ್ ನ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ನಾಡ ದ್ರೋಹ ಹೇಳಿಕೆ ಖಂಡಿಸಿ ಕೊಪ್ಪಳ ಜಿಲ್ಲೆಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಂ ಪಣ್್ಣ   ನಾಯಕ ನೇತೃೃತ್ವದಲ್ಲಿ ಗಂಗಾವತಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿದ ಕರವೇ ಕಾರ್ಯಕರ್ತರು ಲಕ್ಷ್ಮೀ ಹೆಬ್ಬಾಳಕರ್ ವಿರುದ್ದ ದಿಕ್ಕಾರ ಕೂಗಿದರು, ಕರವೇ ಕಾರ್ಯಕರ್ತರು ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ರಾಜ್ಯದಲ್ಲಿದ್ದು ಇಂತಹ ಹೇಳಿಕೆ ನೀಡಿದ ಹೆಬ್ಬಾಳಕರ್ ಕೂಡಲೇ ರಾಜ್ಯದ ಜನರಿಗೆ ಕ್ಷಮೆಯಾಚನೆ ಮಾಡಬೇಕೆಂದು ಕರವೇ ಕಾರ್ಯಕರ್ತರು ಆಗ್ರಹಿಸಿದ್ರು. ಇಂತಹ ನಾಡ ದ್ರೋಹ ಹೇಳಿಕೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಕೂಡಲೇ ಮಹಿಳಾ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕೆಂದು ಕರವೇ ಕಾರ್ಯಕರ್ತರು ಆಗ್ರಹಿಸಿದರು..

Please follow and like us:
error