ಲೋಕಸಭಾ ಚುನಾವಣೆ : ಜಿಲ್ಲಾ ಸಂಪರ್ಕ ಕೇಂದ್ರ ಉದ್ಘಾಟನೆ

ಕೊಪ್ಪಳ ಜ. : 2019ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಸ್ಥಾಪಿಸಲಾದ ಜಿಲ್ಲಾ ಸಂಪರ್ಕ ಕೇಂದ್ರವನ್ನು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಶುಕ್ರವಾರದಂದು ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಅವರು ಜಿಲ್ಲಾ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಫ್ರೀ ದೂರವಾಣಿ ಸಂಖ್ಯೆ 1950 ರೊಂದಿಗೆ ಜಿಲ್ಲಾ ಸಂಪರ್ಕ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಚುನಾವಣೆಯ ಕುರಿತಾದ ವಿಷಯಗಳನ್ನು ಸಾರ್ವಜನಿಕರು ಈ ಕೇಂದ್ರದಿಂದ ಪಡೆದುಕೊಳ್ಳಬಹುದಾಗಿದೆ. ಕೆಲಸದ ದಿನಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 06 ಗಂಟೆಯವರೆಗೆ ಟೋಲ್ ಫ್ರೀ ಸಂಖ್ಯೆ 1950ಕ್ಕೆ ಕರೆ ಮಾಡಿ, ಮತದಾರರ ನೊಂದಣಿಯ ಕುರಿತು, ನೊಂದಣಿಗಾಗಿ ಸಲ್ಲಿಸಿದ ಅರ್ಜಿಗಳ ಸ್ಥಿತಿ, ಮತಗಟ್ಟೆ ಹಾಗೂ ವಿಧಾನಸಭಾ ಕ್ಷೇತ್ರಗಳ ಬಗ್ಗೆ, ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ, ಚುನಾವಣಾ ವಿಷಯಗಳಿಗೆ ಸಂಬಂಧಿಸಿದ ಯಾವುದಾದರೂ ದೂರುಗಳನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ಚುನಾವಣೆಯ ಸಂಬಂಧಿಸಿದ ಯಾವುದೇ ರೀತಿಯ ಮಾಹಿತಿ ಹಾಗೂ ಸಲಹೆಗಳಿಗಾಗಿ ಮತ್ತು ಇತರೆ ಚುನಾವಣಾ ಸಂಬಂಧಿತ ವಿಷಯಗಳಿಗಾಗಿ ಕರೆ ಮಾಡಬಹುದಾಗಿದೆ ಎಂದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಹಾಗೂ ಜಿಲ್ಲಾಧಿಕಾರಿ ಕಾರ್ಯಾಲಯದ ಚುನಾವಣಾ ವಿಭಾಗದ ಅಧಿಕಾರಿಗಳು, ಸಿಬ್ಬಂದಿಗಳು ಮತ್ತಿತರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error