ಲೋಕಸಭಾ ಚುನಾವಣೆ : ಬಿಟ್ಟು ಹೋದ ಮತದಾರರ ನೋಂದಣಿಗೆ ಫೆ. 23 ರಿಂದ ವಿಶೇಷ ಅಭಿಯಾನ

ಕೊಪ್ಪಳ ಫೆ.

ೆ): ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಬಿಟ್ಟು ಹೋದ ಮತದಾರರ ನೋಂದಣಿಗಳಿಗೆ ವಿಶೇಷ ಅಭಿಯಾನವನ್ನು ಫೆ. 23 ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆ 2019ರ ಸಲುವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಬಿಟ್ಟು ಹೋದ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಸಲುವಾಗಿ ಫೆ. 23 ಹಾಗೂ 24 ಮತ್ತು ಮಾರ್ಚ್. 02 ಹಾಗೂ 03 (ಶನಿವಾರ ಮತ್ತು ಭಾನುವಾರ) ಗಳಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 05 ಗಂಟೆಯವರೆಗೆ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳುವಂತೆ ನಿರ್ದೇಶಿಸಿದೆ. ಈ ಪ್ರಯುಕ್ತ, ಮತದಾರರ ಪಟ್ಟಿಯಿಂದ ಹೊರಗುಳಿದವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಸಲುವಾಗಿ ಸಂಬಂಧಪಟ್ಟ ತಹಶೀಲ್ದಾರ ಕಛೇರಿಗಳಲ್ಲಿ, ಬೂತ್‍ಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ನಮೂನೆ-6, ತೆಗೆದು ಹಾಕುವ ಸಲುವಾಗಿ ನಮೂನೆ-7, ತಿದ್ದುಪಡಿಗಾಗಿ ನಮೂನೆ-8 ಮತ್ತು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವರ್ಗಾವಣೆಗಾಗಿ ನಮೂನೆ-8ಗಳನ್ನು ಸಲ್ಲಿಸಬಹುದಾಗಿದೆ.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ನೋಂದಾಯಿಸಿಕೊಳ್ಳಲು ಹಾಗೂ ಚುನಾವಣೆಯ ದಿನದಂದು ಮತದಾನದಲ್ಲಿ ಪಾಲ್ಗೊಂಡು ಮತದಾನದ ಶೇಕಡಾ ಪ್ರಮಾಣವನ್ನು ಹೆಚ್ಚಿಸುವಂತೆ ಜಿಲ್ಲಾಧಿಕಾರಿಗಳು ಪಿ. ಸುನೀಲ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error