ಲೋಕಸಭಾ ಚುನಾವಣೆ : ಸರಳ ಜನ್ಮ ದಿನಾಚರಣೆ ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ಅವರಿಗೆ ಭಕ್ತಿ ನಮನ

ಕೊಪ್ಪಳ ಏ. :  ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಅವರ 128 ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ರ ಹಿನ್ನೆಲೆ ನೀತಿ ಸಂಹಿತೆಯ ಕಾರಣದಿಂದಾಗಿ ಜಿಲ್ಲಾಡಳಿತ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಾನುವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು.   ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಅಪರ ಜಿಲ್ಲಾಧಿಕಾರಿ ಬಾಲಚಂದ್ರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ, ಜಿಲ್ಲಾ ವಾರ್ತಾಧಿಕಾರಿ ಬಿ. ಧನಂಜಯಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು. ಪುತ್ಥಳಿಗೆ ಮಾಲಾರ್ಪಣೆ :  ಬಾಬಾ ಸಾಹೇಬರ್‍ರವರ ಜನ್ಮ ದಿನದ ಅಂಗವಾಗಿ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ನಗರದಲ್ಲಿರುವ ಅಂಬೇಡ್ಕರ್‍ರವರ ಪುತ್ಥಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಕೆ. ಸುಕುಮಾರು ಅವರಿಂದ
ಮಾಲಾರ್ಪಣೆ ಮಾಡಲಾಯಿತು.  ಅಲ್ಲದೇ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ ಸೇರಿದಂತೆ ಹಲವರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದು, ಅಂಬೇಡ್ಕರ್‍ರವರ ಪುತ್ಥಳಿ ಮುಂದೆ ಕ್ಯಾಂಡಲ್ ಹಚ್ಚಿ, ಪುಷ್ಪ ನಮನವನ್ನು ಸಲ್ಲಿಸುವುದರ ಮೂಲಕ ಅಂಬೇಡ್ಕರ್‍ರವರಿಗೆ ಗೌರವ ನಮನವನ್ನು ಸಲ್ಲಿಸಲಾಯಿತು

Please follow and like us:
error