ಲೋಕಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಸಭೆ

Koppal News

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಕೊಪ್ಪಳ ಜಿಲ್ಲೆಯ ಮುಖಂಡರ ಸಭೆ ನಡೆಯಿತು.

ಲೋಕಸಭಾ ಚುನಾವಣೆ 2019 ರ ಅಭ್ಯರ್ಥಿಯ ಆಯ್ಕೆ ಕುರಿತು ಕಾಂಗ್ರೇಸ್ ಪಕ್ಷದ ಉನ್ನತ ಮಟ್ಟದ ಸಭೆ ಇಂದು ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ನಡೆಯಿತು. ಇದರಲ್ಲಿ ಕಾಂಗ್ರೇಸ್ ಪಕ್ಷದ ಜಿಲ್ಲಾ ಉಸ್ತುವಾರಿ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಭಟ್, ಜಿಲ್ಲಾಧ್ಯಕ್ಷ ಬಸವರಾಜ‌ ಹಿಟ್ನಾಳ, ಮಾಜಿ‌ ಸಚಿವರಾದ ಇಕ್ಬಾಲ್ ಅನ್ಸಾರಿ, ಶಿವರಾಜ ತಂಗಡಗಿ, ಮಾಜಿ ಸಂಸದರಾದ ಶಿವರಾಮಗೌಡ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಜಿ.ಪಂ ಅಧ್ಯಕ್ಷರಾದ ರಾಜಶೇಖರ ಹಿಟ್ನಾಳ ಉಪಸ್ಥಿತರಿದ್ದು ಜಿಲ್ಲೆಯ ರಾಜಕಾರಣದ ಕುರಿತು ಚರ್ಚೆ ನಡೆಸಿದರು.

ಮಾಜಿ ಲೋಕಸಭಾ ಸದಸ್ಯ ಶಿವರಾಮಗೌಡ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಬಸವರಾಜ ರಾಯರಡ್ಡಿ, ರಾಜಶೇಖರ ಹಿಟ್ನಾಳ ರೇಸ್ ನಲ್ಲಿದ್ದಾರೆ.