ವರ್ಕಸ್ಲಿಪ್ ಹೆಸರಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, 50 ಕೋಟಿಗೂ ಹೆಚ್ಚು ಗೋಲ್ಮಾಲ್ -ಮುಕುಂದರಾವ್ ಭವಾನಿಮಠ

ವರ್ಕಸ್ಲಿಪ್ ಹೆಸರಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ- 50 ಕೋಟಿಗೂ ಹೆಚ್ಚು ಗೋಲ್ಮಾಲ್ -ಸಣ್ಣ ನೀರಾವರಿ ಇಲಾಖೆಯ ಕಳಪೆ ಕಾಮಗಾರಿ ತನಿಖೆ ಮಾಡಬೇಕು ಎಂದು ಕಾಂಗ್ರೆಸ್  ಮುಖಂಡ ಮುಕುಂದರಾವ್ ಭವಾನಿಮಠ  ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು  ಕೊಪ್ಪಳದ ಸಣ್ಣ ನೀರಾವರಿ ಇಲಾಖೆಯಲ್ಲಿ ತುಂಡು ಗುತ್ತಿಗೆ ಕಾಮಗಾರಿ ಹಗರಣ ಬಯಲಿಗೆ ಬಂದ ನಂತರ ನಡೆದಂತಹ ದೊಡ್ಡ ಹಗರಣ ಇದು. ಅಧಿಕಾರಿಗಳು, ಗುತ್ತಿಗೆದಾರರು ಶಾಮೀಲಾಗಿ ಸರಕಾರದ ಹಣವನ್ನು ಲೂಟಿ ಮಾಡುತ್ತಿದ್ಧಾರೆ ಎಂದು ಆರೋಪಿಸಿದರು. ಈಗಾಗಲೇ ಇದರ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.  ಬಹುತೇಕ ಭೋಗಸ್ ಕಾಮಗಾರಿಗಳಿಗೆ ಬಿಲ್ ಪಾವತಿಸಿ ಭ್ರಷ್ಟಾಚಾರ ಎಸಗಿದ್ದಾರೆ ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು