ವಸತಿ ನಿಲಯಗಳಲ್ಲಿನ ಸಮಸ್ಯೆಗಳ ಬಗ್ಗೆ ಗಮನ ನೀಡಿ: ಎಚ್. ವಿಶ್ವನಾಥ ರೆಡ್ಡಿ

ಕೊಪ್ಪಳ ಡಿ. : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿದ್ಯಾರ್ಥಿ ನಿಲಯಗಳ ಸಮಸ್ಯೆಗಳ ಬಗ್ಗೆ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗುವವರೆಗೆ ಕಾಯದೆ, ನಿಮಗೆ ಸಂಬAಧಿಸಿದ ವಸತಿ ನಿಲಯಗಳಿಗೆ ನಿಯಮಿತವಾಗಿ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸಿ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್. ವಿಶ್ವನಾಥ ರೆಡ್ಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್‌ನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20 ಅಂಶಗಳು ಸೇರಿದಂತೆ) ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ಇಲಾಖೆಗಳ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳಿರುತ್ತವೆ. ಯಲಬುರ್ಗಾ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೀರಿನ ಪೂರೈಕೆ ಇಲ್ಲದೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿರುವ ಕುರಿತು ಪತ್ರಿಕೆಯಲ್ಲಿ ವರದಿಯಾಗಿತ್ತು. ಅಂತಹ ವಸತಿ ನಿಲಯಗಳಲ್ಲಿ ಶಾಶ್ವತ ಪರಿಹಾರ ಒದಗಿಸಿ.  ಕೆಲವೊಂದು ವಸತಿ ನಿಲಯಗಳಲ್ಲಿ ಸಮರ್ಪಕ ಸೌಲಭ್ಯಗಳಿರುವುದಿಲ್ಲ. ಅಂತಹ ವಿಷಯಗಳ ಕುರಿತು ಪತ್ರಿಕೆಗಳಲ್ಲಿ ವರದಿ ಪ್ರಕಟವಾದ ಮೇಲೆ ಸಂಬAಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುವ ಬದಲು ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಆಗಾಗ ಖುದ್ದಾಗಿ ನೀವೇ ವಸತಿ ನಿಲಯಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಸರಿಪಡಿಸಿ. ಸರ್ಕಾರದ ಸೌಲಭ್ಯಗಳನ್ನು ವಸತಿ ನಿಲಯದ ಮಕ್ಕಳಿಗೆ ಸಮರ್ಪಕವಾಗಿ ಒದಗಿಸಿ ಎಂದು ಅವರು ಹೇಳಿದರು.
ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಈಗಾಗಲೇ ಸರ್ಕಾರ ಕ್ರಮ ಕೈಗೊಳ್ಳುವ ಕುರಿತು ಆದೇಶ ಜಾರಿ ಮಾಡಿದೆ. ಕುಟುಂಬದಲ್ಲಿ ಸರ್ಕಾರಿ ನೌಕರಿ ಹೊಂದಿರುವವರು, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದ ಕೃಷಿ ಭೂಮಿಯನ್ನು ಹೊಂದಿದವರು, ಸೇರಿದಂತೆ ನಿಯಮಗಳ ವಿರುದ್ಧ  ಪಡಿತರ ಚೀಟಿ ಪಡೆದುಕೊಂಡವರಿಗೆ ಹಿಂದಿರುಗಿಸಲು ಹಾಗೂ ಮುಂದೆ ಅಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಲು ಪ್ರತಿ ಗ್ರಾಮಗಳಲ್ಲಿ ಡಂಗುರದ ಮೂಲಕ ಜಾಗೃತಿ ಮೂಡಿಸಿ. ಗ್ರಾಮ ಪಂಚಾಯತಿ ಇರುವ ಗ್ರಾಮಗಳಲ್ಲಿ ಮಾತ್ರ ನ್ಯಾಯಬೆಲೆ ಅಂಗಡಿ ತೆರೆಯಲು ಅವಕಾಶವಿದೆ. ಆದರೆ ಆ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮ ದೂರದಲ್ಲಿದ್ದರೆ, ಅಂತಹ ಗ್ರಾಮಗಳಿಗೆ ಹತ್ತಿರದ ನ್ಯಾಯಬೆಲೆ ಅಂಗಡಿಯಿAದ ಪಡಿತರ ದೊರೆಯುವಂತೆ ವ್ಯವಸ್ಥೆ ಮಾಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಕಾಡಾ ರಸ್ತೆ ಎಂದು ಗುರುತಿಸಲ್ಪಟ್ಟ ರಸ್ತೆಗಳು ಅಸಮರ್ಪಕ ನಿರ್ವಹಣೆಯಿಂದ ಹದಗೆಟ್ಟಿವೆ. ಸಾರ್ವಜನಿಕರಿಗೆ ತೀವ್ರ ತೊಂದರೆಯೂ ಆಗಿದೆ. ಆದ್ದರಿಂದ ಶೀಘ್ರ ಆ ರಸ್ತೆಗಳನ್ನು ದುರಸ್ಥಿಗೊಳಿಸಬೇಕು. ಕಾಡಾ ಕಚೇರಿಯಡಿ ಬರುವ ಕೃಷಿ ವಿಭಾಗ, ನೀರು ಹಾಗೂ ಇಂಜಿನಿಯರಿAಗ್ ವಿಭಾಗಗಳ ಪರಿಶೀಲನೆ ಕೈಗೊಳ್ಳಲಾಗುವುದು. ಆ ದಿನದಂದು ಇಲಾಖೆಯ ಎಲ್ಲ ವಿಭಾಗದ ಎಲ್ಲಾ ಅಧಿಕಾರಿಗಳು ಕಚೇರಿಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಕಾಡಾ ಅಧಿಕಾರಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಈ ಹಿಂದೆ ಕಳಪೆ ಬೀಜ ಪೂರೈಕೆ ಪ್ರಕರಣಕ್ಕೆ ಸಂಬAಧಿಸಿದAತೆ ರೈತರಿಗೆ ಇನ್ನೂ ಪರಿಹಾರ ದೊರೆತಿಲ್ಲ.  ತನಿಖೆಗಾಗಿ ಕೃಷಿ ವಿಜ್ಞಾನಿಗಳಿಂದ ವರದಿ ಪಡೆದ ನಂತರವೂ ರೈತರಿಗೆ ಇದರಿಂದ ಅನುಕೂಲವಾಗಿಲ್ಲ. ಪ್ರಸಕ್ತ ವರ್ಷ ಗಂಗಾವತಿ ಭಾಗದಲ್ಲಿ ಭತ್ತ ನಾಟಿ ಮಾಡುವ ಸಲುವಾಗಿ ಭತ್ತದ ಬೀಜಗಳು ದೊರೆಯುತ್ತಿಲ್ಲ ಎಂದು ರೈತರಿಂದ ದೂರುಗಳು ಬಂದಿದ್ದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು. ಬೇಸಿಗೆ ಆರಂಭಕ್ಕೂ ಮೊದಲು ಬಿತ್ತನೆ ಬೀಜಗಳ ದಾಸ್ತಾನು ಹಾಗೂ ವಿತರಣೆ ಕುರಿತು ಸೂಕ್ತ ಕ್ರಮಗಳನ್ನು ರೂಪಿಸಬೇಕು ಎಂದು ಅವರು ಹೇಳಿದರು.
ಪಶು ಸಂಗೋಪನೆ ಇಲಾಖೆಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಕೃತಕ ಗರ್ಭಧಾರಣೆ ನಿರೀಕ್ಷಿತ ಪ್ರಮಾಣದಲ್ಲಿ ನಡೆದಿಲ್ಲ. ಕುಷ್ಟಗಿ ತಾಲ್ಲೂಕಿನ ಹನುಮನಾಳ, ಕೊಪ್ಪಳ ತಾಲ್ಲೂಕಿನ ಹ್ಯಾಟಿ ಗ್ರಾಮಗಳನ್ನು ಹೊರತು ಪಡಿಸಿ ಬೇರೆಲ್ಲೂ ಕೃತಕ ಗರ್ಭಧಾರಣೆ ಕಾರ್ಯ ನಡೆದಿಲ್ಲ. ಈ ಕುರಿತು ಹೆಚ್ಚಿನ ಗಮನ ನೀಡಿ. ಜಾನುವಾರು ಲಸಿಕೆಗಳಿಗೆ ಸಂಬAಧಿಸಿದAತೆ ಮಾಸಿಕ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಕುರಿಗಾಹಿಗಳು, ರೈತರನ್ನು ಒಂದೆಡೆ ಸೇರಿಸಿ ಅವರಿಗೆ ಜಾನುವಾರು ಲಸಿಕೆಗಳ ಅಗತ್ಯತೆ ಕುರಿತು ತಿಳುವಳಿಕೆ ಮೂಡಿಸಿ. ಜಿಲ್ಲೆಯ ಪಶು ಔಷಧಿಗಳು ಬೇರೆ ಜಿಲ್ಲೆಗಳಿಗೆ ರವಾನೆಯಾಗುತ್ತಿರುವ ಕುರಿತು ದೂರು ಬಂದಿದ್ದು ಈ ಕುರಿತು ಪರಿಶೀಲನೆ ನಡೆಸಿ ಶೀಘ್ರ ಮಾಹಿತಿ ನೀಡಿ ಎಂದು ಅವರು ಇಲಾಖಾ ಅಧಿಕಾರಿಗೆ ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬAಧಿಸಿದAತೆ ಮಾತನಾಡಿದ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಾಗಿ ಖಾಸಗಿ ಔಷಧದ ಅಂಗಡಿಗಳಿಗೆ ಚೀಟಿ ಬರೆದು ಕೊಡುತ್ತಿರುವ ದೂರುಗಳು ಕೇಳಿ ಬರುತ್ತಿವೆ. ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಪರಿಶೀಲನೆ ನಡೆಸಿ ಸೂಕ್ತ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಕಂಡುಬAದಿದ್ದು, ಡೆಂಗ್ಯೂ ನಿಯಂತ್ರಣ ಹಾಗೂ ಮುಂಜಾಗ್ರತೆ ಕುರಿತು ಕ್ರಮ ಕೈಗೊಳ್ಳಿ. ಸಾಂಕ್ರಾಮಿಕ ರೋಗಗಳ ಸಂಪೂರ್ಣ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಅವರು ಹೇಳಿದರು.
ಕೆ.ಡಿ.ಪಿ ಹಾಗೂ ಸಾಮಾನ್ಯ ಸಭೆಗಳಿಗೆ ಖುದ್ದಾಗಿ ಅಧಿಕಾರಿಗಳೇ ಬರಬೇಕು ಎಂಬ ಸ್ಪಷ್ಟ ಸೂಚನೆಯ ನಂತರವೂ ಅನೇಕ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಯ ಪ್ರತಿನಿಧಿಗಳನ್ನು ಕಳುಹಿಸುತ್ತಿದ್ದಾರೆ. ಹಾಗೂ ತಾಲ್ಲೂಕುವಾರು ಸಂಪೂರ್ಣ ಮಾಹಿತಿಯನ್ನು ತರಬೇಕು. ಕೇವಲ ಅಂಕಿ ಅಂಶಗಳಿAದ ಮಾಹಿತಿ ಪೂರ್ಣಗೊಳ್ಳುವುದಿಲ್ಲ. ಫಲಾನುಭವಿಗಳ ಸಂಖ್ಯೆ, ಖರ್ಚಾದ ಅನುದಾನ, ಆರ್ಥಿಕ, ಭೌತಿಕ ಸಾಧನೆ ಎಲ್ಲವನ್ನೂ ವಿವರವಾಗಿ ಮಾಹಿತಿ ನೀಡಬೇಕು ಎಂದು ಜಿ.ಪಂ ಅಧ್ಯಕ್ಷರು ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಜಿ.ಪಂ. ಉಪ ಕಾರ್ಯದರ್ಶಿ ಎನ್.ಕೆ. ತೊರವಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಿಂಗರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error