ವಸತಿ ಶಾಲೆ ವಿದ್ಯಾರ್ಥಿನಿ ಸಾವು : ಸಂಸ್ಥೆಯಿಂದ ರೂ. ೨.೦೦ ಲಕ್ಷಗಳ ಪರಿಹಾರ

ಕೊಪ್ಪಳ ಸೆ.   ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಓರ್ವ ವಿದ್ಯಾರ್ಥಿನಿಯು ಪ್ರಾರ್ಥನೆ ವೇಳೆಯಲ್ಲಿ ಆಕಸ್ಮಿಕವಾಗಿ ನೆಲಕ್ಕೆ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ ಸಾವನಪ್ಪಿದ್ದು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ವತಿಯಿಂದ ರೂ.೨.೦೦ ಲಕ್ಷಗಳ ಪರಿಹಾರವನ್ನು ನೀಡಲಾಗುವುದು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಯಲಬುರ್ಗಾದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ೧೦ನೇ ತರಗತಿಯ ಅಶ್ವಿನಿ ತಂದೆ ಬಸವರಾಜ ಬಂಡಿ ಎಂಬ ವಿದ್ಯಾರ್ಥಿನಿಯು ಸೆ. ೧೭ ರಂದು ಪ್ರಾರ್ಥನೆ ವೇಳೆಯಲ್ಲಿ ಆಕಸ್ಮಿಕವಾಗಿ ನೆಲಕ್ಕೆ ಕುಸಿದು ಬಿದ್ದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿಯು ಮೃತಪಟ್ಟಿರುತ್ತಾಳೆ. ಈ ಕುರಿತು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದ್ದು, ಪೋಸ್ಟ್ ಮಾರ್ಟ್ಂ ವರದಿ ಬರಬೇಕಿದೆ. ಈ ಪ್ರಕರಣವು ತನಿಖೆ ಹಂತದಲ್ಲಿದ್ದು, ಮೃತಳ ಪಾಲಕರಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇವರಿಂದ ರೂ. ೨.೦೦ ಲಕ್ಷಗಳ ಪರಿಹಾರವನ್ನು ನೀಡಲಾಗುವುದು .

Please follow and like us:
error