ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ

: ಅರ್ಜಿ ಆಹ್ವಾನ
ಕೊಪ್ಪಳ ಸೆ. 28: ಕೊಪ್ಪಳ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲನ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಿಸೆಂಬರ್. 03 ರಂದು ಆಚರಿಸುವ “ವಿಶ್ವ ಅಂಗವಿಕಲರ ದಿನಾಚರಣೆ” ಯಂದು ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆ, ವ್ಯಕ್ತಿ ಮತ್ತು ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಯನ್ನು ನೀಡಲು ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಉದ್ದೇಶಿಸಿದೆ. ಇಲಾಖೆಯು ಅಂಗವಿಕಲರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ ಹಾಗೂ ಸಲ್ಲಿಸಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಯನ್ನು ನೀಡುತ್ತಿದ್ದು, ಕೊಪ್ಪಳ ಜಿಲ್ಲೆಯ ಅರ್ಹ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಇಲಾಖೆ ವೆಬ್‍ಸೈಟ್ ತಿತಿತಿ.ತಿeಟಜಿಚಿಡಿeoಜಿಜisಚಿbಟeಜ.ಞಚಿಡಿ.ಟಿiಛಿ. ಅಥವಾ ತಿತಿತಿ.ಜತಿಜsಛಿ.ಞಚಿಡಿ.ಟಿiಛಿ.iಟಿ ನಲ್ಲಿ ಪಡೆದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಕೊಪ್ಪಳ ಇವರಿಗೆ ಅಕ್ಟೋಬರ್. 25 ರೊಳಗಾಗಿ ಸಲ್ಲಿಸಬೇಕು. ನಂತರ ಬಂಧ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Please follow and like us:
error