ವಿಜಯನಗರದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಡಾ.ಬಸವರಾಜ ಪೂಜಾರ ನಾಮ ನಿರ್ದೇಶನ


ಕೊಪ್ಪಳ: ನಗರದ ಶ್ರೀಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಹಿರಿಯ ಪ್ರಾಧ್ಯಾಪಕರಾದ ಡಾ ಬಸವರಾಜ ಪೂಜಾರ್ ಇವರು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ( ೩ ವರ್ಷದ ಆವಧಿಯವರೆಗೆ) ನೇಮಕಗೊಂಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರದ ಘನತೆವೆತ್ತ ರಾಜ್ಯಪಾಲರ ಮಾರ್ಗಸೂಚಿಯನ್ವಯ ವಿಜಯನಗರದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರು ದಿನಾಂಕ ೨೩-೦೬-೨೦೨೦ ರಂದು ನಾಮ ನಿರ್ದೇಶನ ಮಾಡಿದ ಅಧಿಸೂಚನೆ ಹೊರಡಿಸಿರುತ್ತಾರೆ. ಡಾ.ಬಸವರಾಜ ಪೂಜಾರ್ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ೨೬ ವರ್ಷಗಳಿಂದಲೂ ಸತತವಾಗಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿದವರು. ಸಾಹಿತ್ಯ, ಸಂಘಟನೆ, ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮನೋಭಾವ ಹೊಂದಿದವರು. ಅಪಾರ ಶಿಷ್ಯಬಳಗ ಮತ್ತು ಪಾಲಕರ ಪ್ರೀತಿಗೆ ಪಾತ್ರರಾದಂತವರು. ಮೂರು ವರ್ಷದ ಅವಧಿಯಲ್ಲಿ ಜನರ ಸಹಕಾರ ಪಡೆದಿಕೊಂಡು ಶೈಕ್ಷಣಿಕ ಹಿತಾಸಕ್ತಿಗಳನ್ನು ಬೆಳೆಸುವಂತಹ ಕೆಲಸ ಕಾರ್ಯಗಳನ್ನು ಮಾಡುವ ಅಭಿಲಾಷೆ ಹೊಂದಿದ್ದಾರೆ. ನನ್ನ ಈ ನೇಮಕಾತಿ ವಿದ್ಯಾರ್ಥಿಗಳಿಗೆ ಸಂದ ಗೌರವವಾಗಿದೆ ಎಂದು ಇವರು ಮನಬಿಚ್ಚಿ ಹೇಳುತ್ತಾರೆ.

Please follow and like us:
error