fbpx

ವಿಜಯನಗರ ಐತಿಹಾಸಿಕ ಕಾಲುವೆಗಳ ಆಧುನೀಕರಣಕ್ಕೆ 370 ಕೋಟಿ ರೂ. ಮೀಸಲು : ರಮೇಶ ಜಾರಕಿಹೋಳಿ


ಕೊಪ್ಪಳ  : ವಿಜಯನಗರ ಐತಿಹಾಸಿಕ ಕಾಲುವೆಗಳ ಆಧುನೀಕರಣಕ್ಕೆ 370 ಕೋಟಿ ರೂಪಾಯಿ ಮೀಸಲಿರಿಸಿದ್ದು ಶೀಘ್ರದಲ್ಲಿಯೇ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೋಳಿ ಅವರು ಹೇಳಿದರು.
ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಐತಿಹಾಸಿಕ ವಿಜಯನಗರ ಕಾಲುವೆಗಳಾದ ಹುಲಿಗೆ, ಶಿವಪುರ ಹಾಗೂ ಇತರೆ ಕಾಲುವೆಗಳ ಆಧುನೀಕರಣ ಕಾಮಗಾರಿಗಳಿಗೆ ತಾಲ್ಲೂಕಿನ ಹುಲಿಗಿ ಗ್ರಾಮದಲ್ಲಿ ಶುಕ್ರವಾರದಂದು (ಜೂ.26) ಭೂಮಿ ಪೂಜೆ ನೆರವೇರಿಸಿ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ವಿಜಯ ನಗರ ಕಾಲುವೆಗಳು ಸುಮಾರು 500 ವರ್ಷಗಳ ಹಿಂದೆ ವಿಜಯನಗರ ಸಾಮ್ರಾಜ್ಯ ಕಾಲದಲ್ಲಿ ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ತುಂಗಭದ್ರ ನದಿಗೆ ಅಡ್ಡಲಾಗಿ ಆಯಾ ಸ್ಥಳಗಳಲ್ಲಿ 11 ಅಣೆಕಟ್ಟುಗಳನ್ನು ಹಾಗೂ 16 ಕಾಲುವೆಗಳ ಜಾಲ ನಿರ್ಮಿಸಲಾಗಿದೆ. ಒಟ್ಟು ಕಾಲುವೆಗಳ ಉದ್ದ 215 ಕಿ.ಮೀ. ಗಳಿದ್ದು, ಅಣೆಕಟ್ಟು ಪ್ರದೇಶವು 11,154 ಹೆಕ್ಟರ್ (27,561 ಎಕರೆ) ಇರುತ್ತದೆ. ಕೊಪ್ಪಳ ಜಿಲ್ಲೆಯಲ್ಲಿ ಹುಲಿಗಿ, ಶಿವಪುರ, ಆನೆಗುಂದಿ, ಗಂಗಾವತಿಯ ಅಪ್ಪರ್ ಮತ್ತು ಲೋವರ್ ಎಡದಂಡೆ ಕಾಲುವೆಗಳು ಹಾಗೂ ಆಣೆಕಟ್ಟಿನ ಪ್ರದೇಶವು ಒಟ್ಟು 2899 ಹೆಕ್ಟರ್ ಅಂದರೆ 7,163 ಎಕರೆಯಷ್ಟು ಪ್ರದೇಶವನ್ನಾಗಿ ಗುರುತಿಸಲಾಗಿದೆ ಎಂದರು.
ಬಳ್ಳಾರಿ ಜಿಲ್ಲೆಯ ರಾಯ, ಬಸವಣ್ಣ, ಬೆಲ್ಲ, ಕಳಘಟ್ಟ, ತುರ್ತಾ, ಬೆಳಗೋಡಹಾಳ, ರಾಮಸಾಗರ, ಕಂಪ್ಲಿ, ದೇಶನೂರು, ಸಿರುಗುಪ್ಪ ಸೇರಿದಂತೆ ಒಟ್ಟು 10 ಬಲದಂಡೆ ಕಾಲುವೆಗಳು ಮತ್ತು ಆಣೆಕಟ್ಟಿನ ಪ್ರದೇಶವು 7,979 ಹೆಕ್ಟರ್ ಅಂದರೆ 19,716 ಎಕರೆ ಪ್ರದೇಶವನ್ನಾಗಿ ಗುರುತಿಸಲಾಗಿದೆ. ಅಲ್ಲದೇ ರಾಯಚೂರು ಜಿಲ್ಲೆಯ ಎಡದಂಡೆ ಕಾಲುವೆಯು ಬಿಜ್ಜಳ ಆಣೆಕಟ್ಟು ಪ್ರದೇಶವು ಸುಮಾರು 276 ಹೆಕ್ಟರ್ ಅಂದರೆ 682 ಎಕರೆಗಳಷ್ಟಿರುತ್ತದೆ. ಈ ಕಾಲುವೆಗಳು ಹಾಗೂ ಆಣೆಕಟ್ಟುಗಳು ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ನಿರ್ಮಿತವಾಗಿದ್ದು, ಪ್ರಸ್ತುತ ಕಾಲುವೆಗಳು ಮೂಲ ಸ್ವರೂಪವನ್ನು ಕಳೆದುಕೊಂಡು ಶಿಥಿಲಾವಸ್ಥೆಯಲ್ಲಿರುವುದರಿಂದ ಎಡಿಬಿ ಸಹಾಯಧನದಿಂದ ಆಧುನೀಕರಣಗೊಳಿಸಲು ಎರಡು ಪ್ಯಾಕೇಜುಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಯೋಜಿಸಲಾಗಿದೆ ಎಂದರು.
03 ಆಣೆಕಟ್ಟುಗಳು ಹಾಗೂ 15 ಕಾಲುವೆಗಳ ಒಟ್ಟು ಉದ್ದ 196.62 ಕಿ.ಮೀ ನಷ್ಟು ಭೂಮಿಯಿದ್ದು, ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಯನ್ನು ಒಳಗೊಂಡಿರುತ್ತದೆ. ವಿಜಯನಗರ ಕಾಲುವೆಗಳು ಮತ್ತು 3 ಆಣೆಕಟ್ಟುಗಳು 371.09 ಕೋಟಿಗಳಿಗೆ ಎಂ/ಎಸ್ ಆರ್.ಎನ್.ಎಸ್. ಇನ್‌ಫ್ರಾಸ್ಟçಕ್ಚರ್ ಲಿಮಿಟೆಡ್ ಇವರಿಗೆ ಟೆಂಡರ್ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿಯನ್ನು ತುಂಗಭದ್ರ ನೀರುನಾಯಿ ಸಂರಕ್ಷಣಾ ಪ್ರದೇಶ ಹಾಗೂ ಹಂಪಿ ವಿಶ್ವ ಪರಂಪರೆ ಸಂರಕ್ಷಣಾ ಪ್ರದೇಶಗಳನ್ನು ಹೊರತು ಪಡಿಸಲಾಗಿದೆ. ಟೆಂಡರ್ ಅವಧಿಯು 30 ತಿಂಗಳು ಇರುತ್ತದೆ ಎಂದರು.
08 ಆಣೆಕಟ್ಟುಗಳು ಮತ್ತು ತುರ್ತಾ ಕಾಲುವೆ ಇದ್ದು, ಕಾಲುವೆಯ ಸುಮಾರು 18.38 ಕಿ.ಮೀ ಗಳಷ್ಟು ಉದ್ದ ಇದ್ದು, ಕಾಮಗಾರಿಗೆ 74.38 ಕೋಟಿಗಳಿಗೆ ಅಂದಾಜು ಪಟ್ಟಿಯನ್ನು ತಯಾರಿಸಲಾಗಿದ್ದು, ಕಾಮಗಾರಿಯು ತುಂಗಾಭದ್ರ ನೀರುನಾಯಿ ರಾಷ್ಟಿçÃಯ ವನ್ಯ ಜೀವಿ ಪ್ರಾಧಿಕಾರ ಮತ್ತು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿಗೆ ಒಳಪಟ್ಟಿರುತ್ತದೆ. ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರವು ಕೆಲವು ಷರತ್ತು ಮತ್ತು ನಿಯಮಾವಳಿಗೆ ಒಳಪಟ್ಟು ಪ್ರಸ್ತಾವನೆಗೆ ಅನುಮತಿ ನೀಡಿರುತ್ತದೆ. ರಾಜ್ಯ ವನ್ಯ ಜೀವಿ ಪ್ರಾಧಿಕಾರವು ಈಗಾಗಲೇ ರಾಷ್ಟೀಯ ವನ್ಯ ಜೀವಿ ಮಂಡಳಿಗೆ ಅನುಮತಿಗಾಗಿ ಶಿಫಾರಸ್ಸು ಮಾಡಲಾಗಿದ್ದು, ಅನುಮೋದನೆ ಪಡೆದುಕೊಂಡು ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಮುನಿರಾಬಾದನ ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಬಸವನಗೌಡ ತುರುವಿಹಾಳ, ಸಂಸದ ಸಂಗಣ್ಣ ಕರಡಿ, ಶಾಸಕರಾದ ರಾಘವೇಂದ್ರ ಕೆ. ಹಿಟ್ನಾಳ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ, ಬಸವರಾಜ ದಢೇಸೂಗೂರ, ತುಂಗಭದ್ರಾ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳು ಮತ್ತು ಜಿ.ಪಂ., ತಾ.ಪಂ., ಹುಲಿಗಿ ಗ್ರಾ.ಪಂ. ಸದಸ್ಯರು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
ದಾಸನಾಳ : 63 ಕೋಟಿ ರೂ.ಗಳ ವೆಚ್ಚದಲ್ಲಿ ಎಡದಂಡೆ ಕಾಲುವೆಯ ಆಧುನೀಕರಣಕ್ಕೆ ಸಚಿವರಿಂದ ಚಾಲನೆ
ಜಲಸಂಪನ್ಮೂಲ ಸಚಿವರಾದ ರಮೇಶ್ ಲ. ಜಾರಕಿಹೊಳಿ ಅವರು ಶುಕ್ರವಾರದಂದು (ಜೂನ್ 26 ರಂದು) ಗಂಗಾವತಿ ತಾಲ್ಲೂಕಿನ ದಾಸನಾಳ ಸೇತುವೆ ಹತ್ತಿರ ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ 63 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ತುಂಗಭದ್ರಾ ಎಡದಂಡೆ ಕಾಲುವೆ ಸಿಸಿ. ಲೈನಿಂಗ್ ಹಾಗೂ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ, ಬಸವರಾಜ ದಢೇಸೂಗೂರ, ತುಂಗಭದ್ರಾ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳು ಮತ್ತು ಜಿ.ಪಂ., ತಾ.ಪಂ. ಸದಸ್ಯರು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

Please follow and like us:
error
error: Content is protected !!