ವಿಜಯನಗರ ಕಾಲುವೆಗಳ ಆಧುನೀಕರಣ  ಕಾಮಗಾರಿ : ಭೂಮಿ ಪೂಜೆ ನೆರವೇರಿಸಿದ ರಮೇಶ ಜಾರಕಿಹೊಳಿ

ಕೊಪ್ಪಳ : ಕೊಪ್ಪಳ ತಾಲ್ಲೂಕಿನ ಹುಲಿಗಿಯಲ್ಲಿ ವಿಜಯನಗರ ಕಾಲುವೆಗಳ ಆಧುನೀಕರಣ ಕಾಮಗಾರಿಯ ಭೂಮಿ ಪೂಜೆಯನ್ನು ಜಲಸಂಪನ್ಮೂಲ ಸಚಿವರಾದ ರಮೇಶ್ ಲ. ಜಾರಕಿಹೊಳಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಮುನಿರಾಬಾದನ ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಬಸವನಗೌಡ ತುರುವಿಹಾಳ, ಸಂಸದ ಸಂಗಣ್ಣ ಕರಡಿ, ಶಾಸಕರಾದ ರಾಘವೇಂದ್ರ ಕೆ. ಹಿಟ್ನಾಳ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ, ಬಸವರಾಜ ದಢೇಸೂಗೂರ,  ತುಂಗಭದ್ರಾ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳು ಮತ್ತು ಜಿ.ಪಂ., ತಾ.ಪಂ., ಹುಲಿಗಿ ಗ್ರಾ.ಪಂ. ಸದಸ್ಯರು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

Please follow and like us:
error