ವಿಜೃಂಭಣೆಯಿಂದ ಶಿವಯೋಗಿ ಸಿದ್ದರಾಮ ಜಯಂತಿ ಆಚರಣೆ : ಕೃಷ್ಣಮೂರ್ತಿ ದೇಸಾಯಿ

ಕೊಪ್ಪಳ ಜ.: ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಶಿವಯೋಗಿ ಸಿದ್ದರಾಮರವರ ಜಯಂತಿಯನ್ನು ವಿಜೃಂಭಣೆಯಿಂದ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ ದೇಸಾಯಿ ಅವರು ಹೇಳಿದರು. ಶಿವಯೋಗಿ ಸಿದ್ದರಾಮರವರ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿವಯೋಗಿ ಸಿದ್ದರಾಮರವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಇದೇ ಜನವರಿ ತಿಂಗಳಲ್ಲಿ ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿ ಆಚರಿಸಲಾಗುವುದು. ಕಾರ್ಯಕ್ರಮ ದಿನದಂದು ಅಂದು ಬೆಳಿಗ್ಗೆ 09 ಗಂಟೆಗೆ ಶಿವಯೋಗಿ ಸಿದ್ದರಾಮರವರ ಭಾವಚಿತ್ರದ ಮೇರವಣಿಗೆಯನ್ನು ಏರ್ಪಡಿಸಲಾಗಿದ್ದು, ಮೇರವಣಿಗೆಯು ನಗರದ ಗವಿಸಿದ್ಧೇಶ್ವರ ಮಠದಿಂದ ಪ್ರಾರಂಭಗೊಂಡು, ಗಡಿಯಾರ ಕಂಬದ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ಸಾಗಿ ಬರಲಿದೆ. ಎರಡು ವಿಶೇಷ ಕಲಾ ತಂಡಗಳು ಪಾಲ್ಗೊಂಡು ಮೇರವಣಿಗೆಯನ್ನು ಆಕರ್ಷಕಗೊಳಿಸಲಿವೆ. ನಂತರ ಬೆಳಿಗ್ಗೆ 11-30 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ ಶಾಸಕರು, ಸಂಸದರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ಶಿವಯೋಗಿ ಸಿದ್ದರಾಮರವರ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು. ಜಯಂತಿ ಆಚರಣೆ ಕಾರ್ಯಕ್ರಮ ದಿನದಂದು, ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ವತಿಯಿಂದ ಕಲ್ಪಿಸಲಾಗುವುದು. ಪೊಲೀಸ್ ಇಲಾಖೆಯಿಂದ ಅಗತ್ಯ ಪೆÇಲೀಸ್ ಬಂದೋಬಸ್ತ್ ಕಲ್ಪಿಸಲಾಗುವುದು. ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ ದೇಸಾಯಿ ಅವರು ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ. ಬಸವರಾಜ, ಆರೋಗ್ಯ ಇಲಾಖೆ ಶಿವಾನಂದ ಪೂಜಾರ, ಅರಣ್ಯ ಇಲಾಖೆಯ ರಾಜುನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ಸುಮಂತರಾವ ಪಟವಾರಿ, ಸಾಹಿತಿ ಮಹಾಂತೇಶ ಮಲ್ಲನಗೌಡರ, ಮಂಜುನಾಥ ಗೊಂಡಬಾಳ, ಮುಖಂಡರಾದ ವೆಂಕಟೇಶ ಕಂಪಸಾಗರ, ಗಾಳೆಪ್ಪ ಭೊವಿ, ನಿಂಗಪ್ಪ ಭೊವಿ, ರೇವಣಪ್ಪ ಮ್ಯಾಗೇರಿ ಮತ್ತಿತರರು ಉಪಸ್ಥಿತರಿದ್ದು, ಉಪಯುಕ್ತ ಸಲಹೇ ಸೂಚನೆಗಳನ್ನು ನೀಡಿದರು.

ಅರ್ಥಪೂರ್ಣವಾಗಿ ಮಹಾಯೋಗಿ ವೇಮನ ಜಯಂತಿ ಆಚರಣೆ :

ಇದೇ ಜ. 19 ರಂದು ಮಹಾಯೋಗಿ ವೇಮನ ಅವರ ಜಯಂತಿಯನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ ದೇಸಾಯಿ ಅವರು ಹೇಳಿದರು. ಮಹಾಯೋಗಿ ವೇಮನರ ಜಯಂತಿಯನ್ನು ಜ. 19 ರಂದು ರಂದು ಬೆಳಿಗ್ಗೆ 10-30 ಗಂಟೆಗೆ ಕಿನ್ನಾಳ ರಸ್ತೆಯ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಹಾಯೋಗಿ ವೇಮನರ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ವೇದಿಕೆ ಮೇಲಿರುವ ಎಲ್ಲಾ ಗಣ್ಯರಿಗೆ ವೇಮನರ ಕುರಿತಾದ ಕಿರು ಪುಸ್ತಕವನ್ನು ನೀಡಲಾಗುವುದು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು. ಸಮಾಜ ಬಾಂಧವರು, ಸಾರ್ವಜನಿಕರು ಮೆರವಣಿಗೆ ಹಾಗೂ ಸಮಾರಂಭದಲ್ಲಿ ಪಾಲ್ಗೊಂಡು ಸಹಕಾರ ನೀಡಬೇಕು. ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಕಾರ್ಯಕ್ರಮ ದಿನದಂದು, ರಸ್ತೆ ಸ್ವಚ್ಛತೆ, ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ನಗರಸಭೆಯವರು ಕಲ್ಪಿಸಿಕೊಡಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ ದೇಸಾಯಿ ಅವರು ಹೇಳಿದರು. ಸಭೆಯಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ. ಬಸವರಾಜ, ಆರೋಗ್ಯ ಇಲಾಖೆ ಶಿವಾನಂದ ಪೂಜಾರ, ಅರಣ್ಯ ಇಲಾಖೆಯ ರಾಜುನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾಹಿತಿ ಮಹಾಂತೇಶ ಮಲ್ಲನಗೌಡರ, ಮಂಜುನಾಥ ಗೊಂಡಬಾಳ, ಮುಖಂಡರಾದ ಸಿ.ವಿ. ಚಂದ್ರಶೇಖರ, ಕೆ. ಅಮರೇಶ ಪಾಟೀಲ, ಚಂದ್ರಶೇಖರಗೌಡ ಪಾಟೀಲ, ಸಂಜೀವರೆಡ್ಡಿ ಮತ್ತಿತರರು ಉಪಸ್ಥಿತರಿದ್ದು, ಉಪಯುಕ್ತ ಸಲಹೇ ಸೂಚನೆಗಳನ್ನು ನೀಡಿದರು.

ಜ. 21 ರಂದು ಅಂಬಿಗರ ಚೌಡಯ್ಯ ಜಯಂತಿ ಆಚರಣೆಗೆ ನಿರ್ಧಾರ : ಕೃಷ್ಣಮೂರ್ತಿ ದೇಸಾಯಿ

ಕೊಪ್ಪಳ ಜ.: ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಇದೇ ಜ. 21 ರಂದು ಅಂಬಿಗರ ಚೌಡಯ್ಯನವರ ಜಯಂತಿಯನ್ನು ವಿಜೃಂಭಣೆಯಿಂದ ಜಿಲ್ಲಾ ಕೇಂದ್ರದಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ ದೇಸಾಯಿ ಅವರು ಹೇಳಿದರು. ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜ. 21 ರಂದು ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿ ಆಯೋಜಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 09 ಗಂಟೆಗೆ ನಗರದ ಸಿರಸಪ್ಪಯ್ಯನಮಠ ಆವರಣದಿಂದ ಅಂಬಿಗರ ಚೌಡಯ್ಯನವರ ಭಾವಚಿತ್ರದ ಮೆರವಣಿಗೆ ಹೊರಡಲಿದ್ದು, ಮೆರವಣಿಗೆಯು, ಗಡಿಯಾರ ಕಂಬ, ಜವಾಹರ ರಸ್ತೆ, ಅಶೋಕ ವೃತ್ತ ಮೂಲಕ ಸಾಹಿತ್ಯ ಭವನದವರೆಗೂ ಸಾಗಿ ಬರಲಿದೆ. ಮೆರವಣಿಗೆಯಲ್ಲಿ ಎರಡು ಜಾನಪದ ಕಲಾ ತಂಡಗಳು ಭಾಗವಹಿಸಿ, ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ. ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಜರುಗಲಿದ್ದು, ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. 05 ಜನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು. ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಮೆರವಣಿಗೆ ಹಾಗೂ ಸಮಾರಂಭದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಪಾಲ್ಗೊಳ್ಳಬೇಕು. ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್, ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ, ಮೆರವಣಿಗೆ ಸಾಗಿ ಬರುವ ರಸ್ತೆಯನ್ನು ಸ್ವಚ್ಛಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ ದೇಸಾಯಿ ಹೇಳಿದರು. ಸಭೆಯಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ. ಬಸವರಾಜ, ಆರೋಗ್ಯ ಇಲಾಖೆ ಶಿವಾನಂದ ಪೂಜಾರ, ಅರಣ್ಯ ಇಲಾಖೆಯ ರಾಜುನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ಸುಮಂತರಾವ ಪಟವಾರಿ, ಸಾಹಿತಿ ಮಹಾಂತೇಶ ಮಲ್ಲನಗೌಡರ, ಮಂಜುನಾಥ ಗೊಂಡಬಾಳ, ಮುಖಂಡರಾದ ಬಾಳಪ್ಪ ಬಾರಕೇರ, ಗಂಗಾದರ ಕಟ್ಟೆ, ಶೇಖರಪ್ಪ ಸಿಂದೋಗಿ, ಮರಿಯಪ್ಪ, ಮಂಜುನಾಥ, ರಾಜು ಕಲೆಗಾರ, ಸೋಮು ಆರ್.ಎಚ್., ವಸಂತ ಕುಮಾರ, ಕುಮಾರ ಸ್ವಾಮಿ ಬಾರಕೇರ ಮತ್ತಿತರರು ಉಪಸ್ಥಿತರಿದ್ದು, ಉಪಯುಕ್ತ ಸಲಹೇ ಸೂಚನೆಗಳನ್ನು ನೀಡಿದರು.

Please follow and like us:
error