ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ

ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2016-17ನೇ ಸಾಲಿನಲ್ಲಿ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಮೂಲದಾಖಲೆಗಳನ್ನು ಪರಿಶೀಲಿಸಿಕೊಳ್ಳಲು ಇಲಾಖೆ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವೆಬ್‍ಸೈಟ್ ತಿತಿತಿ.ಞಚಿಡಿ.ಟಿiಛಿ.iಟಿ ನಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಅದರನ್ವಯ ಮೂಲ ದಾಖಲೆಗಳನ್ನು ಪರಿಶೀಲನೆಗೆ ಸಲ್ಲಿಸದೇ ಇರುವ ಅಭ್ಯರ್ಥಿಗಳು ನವೆಂಬರ್. 04 ಮತ್ತು 05 ರಂದು ಕಡ್ಡಾಯವಾಗಿ ಎಲ್ಲಾ ಮೂಲ ಅಂಕಪಟ್ಟಿಗಳನ್ನು ಮತ್ತು ಅರ್ಜಿಯಲ್ಲಿ ನಮೂದಿಸಿದಂತಹ ವಿವರದ ಎಲ್ಲಾ ಮೂಲ ದಾಖಲೆಗಳನ್ನು ಉಪನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಇಲ್ಲಿ ಪರಿಶೀಲನೆಗೆ ಒದಗಿಸಿ ಪರಿಶೀಲನೆ ನಂತರ ದೃಢಿಕೃತ ಪ್ರತಿಗಳನ್ನು ಮಾತ್ರ ಸಲ್ಲಿಸಿ, ಮೂಲ ದಾಖಲೆಗಳನ್ನು ಪುನಃ ಹಿಂಪಡೆದುಕೊಂಡು ಹೋಗಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ದೂರವಾಣಿ ಸಂಖ್ಯೆ 08539-220138 ಕ್ಕೆ ಸಂಪರ್ಕಿಸಲು ತಿಳಿಸಿದೆ.

ಕೊಪ್ಪಳ ನಗರಸಭೆ ವತಿಯಿಂದ ಪ್ರೋತ್ಸಾಹಧನ : ಅರ್ಜಿ ಆಹ್ವಾನ
: ಕೊಪ್ಪಳ ನಗರಸಭೆ ವತಿಯಿಂದ ರಾಜ್ಯ/ ರಾಷ್ಟ್ರೀಯ ಮಟ್ಟದ ಕ್ರೀಡೆ, ಕಲೆ, ಸಂಸ್ಕøತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳ ಸ್ಪರ್ಧೆಯಲ್ಲಿ ಭಾಗವಹಿಸುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ಕ್ರೀಡಾ ಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ನಗರಸಭೆಯ ಪ್ರಸಕ್ತ ಸಾಲಿನ 24.10%ರ ಯೋಜನೆಯಡಿ ನಗರಸಭೆ ಅನುಧಾನದಡಿಯಲ್ಲಿ (40%) ವ್ಯಕ್ತಿ ಸಂಬಂಧಿತ ಕಾರ್ಯಕ್ರಮದಲ್ಲಿ, ಸರ್ಕಾರದ ವಿವಿಧ ಇಲಾಖೆಗಳಿಂದ ಆಯೋಜಿಸಲ್ಪಡುವ ರಾಜ್ಯ/ ರಾಷ್ಟ್ರೀಯ ಮಟ್ಟದ ಕ್ರೀಡೆ, ಕಲೆ, ಸಾಂಸ್ಕøತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳ ಸ್ಪರ್ಧೆಯಲ್ಲಿ ಭಾಗವಹಿಸುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ಕ್ರೀಡಾ ಪಟುಗಳಿಗೆ ಪ್ರೋತ್ಸಾಹಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ನವೆಂಬರ್. 08 ಕೊನೆಯ ದಿನಾಂಕವಾಗಿದ್ದು, ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅವಧಿ ಮೀರಿ ಬಂದ ಹಾಗೂ ಅಪೂರ್ಣ ದಾಖಲೆಗಳನ್ನು ಲಗತ್ತಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error