ವಿದ್ಯಾರ್ಥಿಗಳ ಮನೋವಿಕಾಸಕ್ಕೆ ವಿಜ್ಞಾನ ವಸ್ತುಪ್ರದರ್ಶನ ಪೂರಕ: ಹಾಲಪ್ಪ ಆಚಾರ್


ಕೊಪ್ಪಳ: ಕುಕನೂರ- ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವರೂಢಿಸಲು, ಅವರಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಲು ಮತ್ತು ಮಕ್ಕಳ ಮನೋವಿಕಾಸಕ್ಕೆ ವಿಜ್ಞಾನ ವಸ್ತು ಪ್ರದರ್ಶನ ಪೂರಕ ವಾತಾವರಣ ಕಲ್ಪಿಸುತ್ತದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಭಾಜಪ ಮುಖಂಡ ಹಾಲಪ್ಪ ಆಚಾರ್ ಅಭಿಪ್ರಾಯಪಟ್ಟರು. ಕುಕನೂರ ಸಮೀಪದ ಮಸಬಹಂಚಿನಾಳ ಗ್ರಾಮದ ಶ್ರಿಮತಿಗೌರಮ್ಮ ಬಸಪ್ಪ ಆಚಾರ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಮುಂಜಾನೆ ಆಯೋಜಿಸಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವಿದ್ಯಾರ್ಥಿಗಳ ಆಲೋಚನಾ ಶಕ್ತಿಯನ್ನು ಜಾಗೃತಗೊಳಿಸಿ, ಕ್ರೀಯಾಶೀಲರನ್ನಾಗಿಸುವ ನಿಟ್ಟಿನಲ್ಲಿ ನಡೆದಿರುವ ವಿಜ್ಞಾನ ವಸ್ತು ಪ್ರದರ್ಶನ ವಿವಿಧ ವೈಜ್ಞಾನಿಕ ಉಪಕರಣಗಳ ಸಹಾಯದಿಂದ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸುವ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಅನೇಕ ಮಾದರಿಗಳು ಪ್ರದರ್ಶನವಾಗುತ್ತಿರುವುದು ಸಂತೋಷದಾಯಕ ವಿಚಾರ ಎಂದು ಹೇಳಿದ ಅವರು, ಅಪ್ಪಟ ದೇಶಭಕ್ತ. ಸುಭದ್ರ ಭಾರತದ ಕನಸು ಕಂಡ ಹಾಗೂ ಅದರ ನಿರ್ಮಾಣಕ್ಕಾಗಿ ಜೀವನವನ್ನೇ ಮುಡುಪಾಗಿಟ್ಟ ಧೀಮಂತ. ಮಹಾ ಮೇಧಾವಿ. ಈ ದೇಶ ಕಂಡ ಅತ್ಯುತ್ತಮ ವಿಜ್ಞಾನಿಗಳಲ್ಲೊಬ್ಬರು. ಚಿಕ್ಕ ಮಕ್ಕಳಿಂದ ಆರಂಭವಾಗಿ ಐಐಟಿ, ಐಐಎಂ ವಿದ್ಯಾರ್ಥಿಗಳೆಲ್ಲರಿಗೂ ನೆಚ್ಚಿನ ಗುರುವಾಗಿದ್ದ ಮಿಸ್ಸೈಲ್ ಮ್ಯಾನ್, ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂ ಅವರೊಬ್ಬ ಕರ್ಮಯೋಗಿ, ಅವರ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂದು ಹಾಲಪ್ಪ ಆಚಾರ್ ಕರೆ ನೀಡಿದರು.

ಶಾಲಾ ಮೇಲುಸ್ತುವಾರಿ ಸಮಿತಿ ಅದ್ಯಕ್ಷ ರಾಘವೇಂದ್ರ ದೇಸಾಯಿ, ಮುಖ್ಯೋಪಾದ್ಯಾಯ ರವೀಂದ್ರನಾಥ ಬಿ,ಗ್ರಾ.ಪಂ ಸದಸ್ಯ ನಿಂಗಪ್ಪ ಗೋಡೇಕಾರ, ವಿಎಸ್‍ಎಸ್‍ಎನ್ ಅದ್ಯಕ್ಷ ಪ್ರಭುರಾಜ ಪಾಟೀಲ್ ಇತರರು ಇದ್ದರು.

Please follow and like us:
error

Related posts

Leave a Comment