ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ನೇಮಕ

ಕೊಪ್ಪಳ ಮಾ.   ಕೊಪ್ಪಳ ಜಿಲ್ಲೆಯ ೬೦-ಕುಷ್ಟಗಿ, ೬೧-ಕನಕಗಿರಿ, ೬೨-ಗಂಗಾವತಿ, ೬೩-ಯಲಬುರ್ಗಾ ಹಾಗೂ ೬೪-ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಪ್ರಶಾಂತ್ ಪಿ.ಬಿ.- ೯೪೮೦೭೮೯೦೭೭ ಅವರು ಚುನಾವಣಾಧಿಕಾರಿಯಾಗಿದ್ದು, ಕುಷ್ಟಗಿ ತಹಸಿಲ್ದಾರ್ ಎಚ್. ವಿಶ್ವನಾಥ್-೯೪೮೩೬೬೯೩೬೬ ಅವರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ.
ಕನಕಗಿರಿ ವಿಧಾನಸಭಾ ಕ್ಷೇತ್ರಕ್ಕೆ ಕೊಪ್ಪಳ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಎಚ್.ವಿ. ನಾಗರಾಜ್- ೯೪೪೮೬೫೨೭೪೮ ಅವರು ಚುನಾವಣಾಧಿಕಾರಿಯಾಗಿದ್ದು, ಕಾರಟಗಿಯ ವಿಶೇಷ ತಹಸಿಲ್ದಾರ್ ವಿಜಯಕುಮಾರ್-೯೯೮೦೨೬೫೮೩೦ ಅವರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ.
ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಕೊಪ್ಪಳ ಉಪವಿಭಾಗಾಧಿಕಾರಿ ರವಿ ತಿರ್ಲಾಪುರ-೯೯೪೫೨೨೮೨೫೦ ಅವರು ಚುನಾವಣಾಧಿಕಾರಿಯಾಗಿದ್ದು, ಗಂಗಾವತಿ ತಹಸಿಲ್ದಾರ್ ರವಿ ಅಂಗಡಿ- ೯೪೪೯೨೯೪೪೧೦ ಅವರು ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ.
ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ- ೯೭೩೯೫೮೨೬೧೯ ಚುನಾವಣಾಧಿಕಾರಿಯಾಗಿ ನೇಮಕಗೊಂಡಿದ್ದು, ಯಲಬುರ್ಗಾ ತಹಸಿಲ್ದಾರ್ ರಮೇಶ ಅಳವಂಡಿಕರ್- ೯೯೮೬೬೮೪೫೯೨ ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ.
ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸಿ.ಡಿ. ಗೀತಾ- ೯೮೮೬೬೬೦೮೪೭ ಅವರು ಚುನಾವಣಾಧಿಕಾರಿಯಾಗಿ ಹಾಗೂ ಕೊಪ್ಪಳ ತಹಸಿಲ್ದಾರ್ ಗುರುಬಸವರಾಜ-೯೧೬೪೮೧೩೪೫೧ ಅವರು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕವಾಗಿದ್ದಾರೆ.
ಈಗಾಗಲೆ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ಸಾರ್ವಜನಿಕವಾಗಿ ಯಾವುದೇ ಸಭೆ, ಸಮಾರಂಭ, ವಾಹನಗಳ ಬಳಕೆ, ಮೆರವಣಿಗೆಗಳನ್ನು ನಡೆಸಲು ಉದ್ದೇಶಿಸಿದ್ದಲ್ಲಿ, ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾಧಿಕಾರಿಗಳ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು. ತಪ್ಪಿದಲ್ಲಿ ಅಂತಹ ಪ್ರಕರಣವನ್ನು ನೀತಿ ಸಂಹಿತೆ ಉಲ್ಲಂಘನೆ ಎಂದು ಪರಿಗಣಿಸಿ, ಚುನಾವಣಾ ಆಯೋಗದ ನಿರ್ದೇಶನಗಳಂತೆ ಕ್ರಮ ಜರುಗಿಸಲಾಗುವುದು. ಅನುಮತಿಗಳನ್ನು ಆಯಾ ತಹಸಿಲ್ದಾರರ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಗಳಿಗೆ ನಿಯಮಾನುಸಾರ ಅರ್ಜಿ ಸಲ್ಲಿಸಿ ಪರವಾನಿಗೆ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಎಂ. ಕನಗವಲ್ಲಿ   ಸೂಚನೆ ನೀಡಿದ್ದಾರೆ.