ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ :ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ DC ಪಿ.ಸುನೀಲ್ ಕುಮಾರ್ ಚಾಲನೆ


ಕೊಪ್ಪಳ,  : ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಆಟೋ ಪ್ರಚಾರ ಹಾಗೂ ಕರಪತ್ರ/ಭಿತ್ತಿ ಪತ್ರಗಳ ಮೂಲಕ ಹಮ್ಮಿಕೊಳ್ಳಲಾದ “ಕಾನೂನು ಅರಿವು-ನೆರವು ಕಾರ್ಯಕ್ರಮ”ಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆ ಅಧ್ಯಕ್ಷರಾದ ಪಿ.ಸುನೀಲ್ ಕುಮಾರ್ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೋಲಿಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆ, ಮಕ್ಕಳ ಸಹಾಯವಾಣಿ (1098) ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಇವರುಗಳ ಸಹಯೋಗದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಅಂಗವಾಗಿ ಆಟೋ ಪ್ರಚಾರ ಹಾಗೂ ಕರಪತ್ರ/ಭಿತ್ತಿ ಪತ್ರಗಳ ಮೂಲಕ “ಕಾನೂನು ಅರಿವು-ನೆರವು ಕಾರ್ಯಕ್ರಮ”ವನ್ನು ಇಂದು (ಜೂ.12) ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆ ಅಧ್ಯಕ್ಷರಾದ ಪಿ.ಸುನೀಲ್ ಕುಮಾರ್, ಸಮಾಜದ ಶ್ರೇಯೋಭಿವೃದ್ಧಿಯಾಗಬೇಕಾದರೆ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಅತ್ಯವಶ್ಯಕವಾಗಿದೆ. ಯಾವುದೇ ಕ್ಷೇತ್ರಗಳಲ್ಲಿ ಕೆಲಸಕ್ಕಾಗಿ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಪ್ರಸ್ತುತದ ಲಾಕ್‌ಡೌನ್ ಸಮಯದಲ್ಲಿ ಇಂತಹ ಪ್ರಕರಣಗಳು ಕಂಡು ಬರುವುದು ಸಾಮಾನ್ಯ.  ಆದ್ದರಿಂದ ಕಾರ್ಮಿಕ ಇಲಾಖೆ ಹಾಗೂ ಇದಕ್ಕೆ ಸಂಬAಧಿಸಿದ ಅಧಿಕಾರಿಗಳು ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಿರುವAತಹ ಪ್ರದೇಶಗಳಿಗೆ ದಾಳಿ ಮಾಡಿ ಮಕ್ಕಳನ್ನು ರಕ್ಷಿಸಬೇಕು.  ಅಲ್ಲದೇ ಸಂಬAಧಪಟ್ಟ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು.  ಇಂತಹ ಪ್ರಕರಣಗಳಾಗದಂತೆ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಬೇಕು.  ಈ ಪದ್ಧತಿಗೆ ಅನೇಕ ಸಮಸ್ಯೆಗಳಿದ್ದು, ಮುಖ್ಯವಾಗಿ ಶಿಕ್ಷಣದ ಕೊರತೆಯಾಗಿದೆ.  ಕಡ್ಡಾಯ ಶಿಕ್ಷಣ ಪ್ರತಿಯೊಬ್ಬ ಮಕ್ಕಳ ಮೊದಲ ಹಕ್ಕಾಗಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಎಲ್ಲಾ ಪಾಲಕರ ಕರ್ತವ್ಯವಾಗಿದೆ.  ಈ ನಿಟ್ಟಿನಲ್ಲಿ ಕಾನೂನು ಅರಿವು ಅತ್ಯವಶ್ಯಕವಾಗಿದ್ದು, ಮಕ್ಕಳ ಹಕ್ಕುಗಳ ಬಗ್ಗೆ ಮಕ್ಕಳಲ್ಲಿ ಹಾಗೂ ಅವರ ಪಾಲಕರಿಗೆ ಅರಿವು ಮೂಡಿಸಿ ಜಾಗೃತಗೊಳಿಸಿ.  ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ಜವಾಬ್ದಾರಿಯು ಪ್ರತಿಯೊಬ್ಬರ ಮೇಲಿದ್ದು, ಮಕ್ಕಳಿಗೆ ಕೆಲಸಕ್ಕೆ ಇಟ್ಟುಕೊಂಡ ಪ್ರಕರಣಗಳು ಹಾಗೂ ಯಾವುದೇ ರೀತಿಯ ದೌರ್ಜನ್ಯ ಕಂಡುಬAದಲ್ಲಿ ಸಾರ್ವಜನಿಕರು ಕೂಡಲೇ ಮಕ್ಕಳ ಸಹಾಯವಾಣಿ 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದರು.
ಕಾರ್ಯಕ್ರಮದ ಅಂಗವಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ ಅವರು ಕರಪತ್ರ/ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು.  ಜಿಲ್ಲಾ ಕಾರ್ಮಿಕ ಅಧಿಕಾರಿ ವೀಣಾ ಮಾಸ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ ಗಿರಡ್ಡಿ, ಕೊಪ್ಪಳ ತಹಶೀಲ್ದಾರ ಜೆ.ಬಿ. ಮಜ್ಜಗಿ, ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ-ಯುನಿಸೆಫ್ ತರಬೇತಿ ಸಂಯೋಜಕ ಹರೀಶ್ ಜೋಗಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
“ಬನ್ನಿ ಬಾಲಕಾರ್ಮಿಕ ಪದ್ಧತಿಯನ್ನು ಅಳಿಸೋಣ” ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತರಲು ಸಂಘಟಿತರಾಗಿ ಪ್ರಯತ್ನಿಸಬೇಕಿದೆ;    ಮಕ್ಕಳು ರಾಷ್ಟçದ ಸಂಪತ್ತು, ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ದತಿಯು ಮಕ್ಕಳನ್ನು ದೈಹಿಕ, ನೈತಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶಗಳನ್ನು ತಡೆಗಟ್ಟುತ್ತದೆ.  ಕಲಿಯುವ ವಯಸ್ಸಿನಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿದು ದುಡಿಮೆಯಲ್ಲಿ ತೊಡಗಿಕೊಳ್ಳುವುದು ಅತ್ಯಂತ ಕಳವಳಕಾರಿಯಾಗಿದೆ.  ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವಂತಹ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತರಲು ಕೇಂದ್ರ, ರಾಜ್ಯ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಿದೆ.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಿದ್ದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಸಲಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ಸಂಜ್ಞೆಯ ಅಪರಾಧವಾಗಿದೆ. ಶಿಕ್ಷಣಕ್ಕೆ ಮಾರಕವಾಗದಂತೆ ಮಗುವಿನ ಕುಟುಂಬವು ನಡೆಸುವ ಉದ್ದಿಮೆಗಳನ್ನು ಹಾಗು ಬಾಲನಟ/ನಟಿಯಾಗಿ ಕೆಲಸ ನಿರ್ವಹಿಸಲು ಸೀಮಿತ ಅವಕಾಶವನ್ನು ಮಾತ್ರ ಕಲ್ಪಿಸಲಾಗಿದೆ.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರಂತೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿAದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 20 ಸಾವಿರ ದಿಂದ 50 ಸಾವಿರ ರೂ.ಗಳವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ. ಪೋಷಕರಾಗಿದ್ದಲ್ಲಿ ಲಘು ಶಿಕ್ಷಾ ಪ್ರಾವಧಾನವಿದ್ದು ಪುನರಾವರ್ತಿತ ಅಪರಾಧಕ್ಕೆ 10 ಸಾವಿರ ರೂ.ಗಳ ದಂಡವನ್ನು ವಿಧಿಸಬಹುದಾಗಿರುತ್ತದೆ.
ಭಾರತದ ಸರ್ವೋಚ್ಛ ನ್ಯಾಯಾಲಯವು ರಿಟ್ ಅರ್ಜಿ (ಸಿವಿಲ್) ಸಂಖ್ಯೆ 465/1986 ರಲ್ಲಿ ನೀಡಿರುವ ನಿರ್ದೇಶನದನ್ವಯ ತಪ್ಪಿತಸ್ಥ ಮಾಲೀಕರು ತಾವು ನಿಯೋಜಿಸಿಕೊಂಡ ಪ್ರತಿ ಮಗುವಿನ 20 ಸಾವಿರ ರೂ.ಗಳನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಬಾಲಕಾರ್ಮಿಕ ಪುರ್ನವಸತಿ ಕಲ್ಯಾಣ ನಿಧಿಗೆ ಪಾವತಿಸಬೇಕಾಗಿರುತ್ತದೆ.  ಮಕ್ಕಳ ಬಾಲ್ಯವನ್ನು ಉಳಿಸೋಣ, ಅವರ ದುಡಿತ ತಪ್ಪಿಸಿ, ವಿದ್ಯೆ, ಆರೋಗ್ಯವನ್ನು ಒದಗಿಸಿ, ದೇಶದ ಉನ್ನತಿಗೆ ಶ್ರಮಿಸೋಣ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ, ಶಾಲೆಗೆ ಸೇರಿಸಲು ಪೋಷಕರು ಮತ್ತು ಸಾರ್ವಜನಿಕರೆಲ್ಲರೂ ಕೈಜೋಡಿಸೋಣ.
6 ರಿಂದ 14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳಲ್ಲಿ ಹಾಗೂ 14 ರಿಂದ 18 ವಯಸ್ಸಿನವರೆಗೆ ಕಿಶೋರರು ಅಪಾಯಕಾರಿ ಉದ್ದಿಮೆಗಳಲ್ಲಿ  (ಫ್ಯಾಕ್ಟರಿ, ಮೈನ್ಸ್, ಕೆಮಿಕಲ್ಸ್, ಎಕ್ಸಪ್ಲೋಜಿಮ್ಸ್ ಹಾಗೂ ಇತರೆ) ದುಡಿಯುವುದು ಕಂಡಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಸಂಪರ್ಕಿಸಿ ದೂರು ನೀಡಿ ಇಲ್ಲವೆ ಕೆಳಗೆ ತೋರಿಸಿದ ಸಹಾಯವಾಣಿಗಳಿಗೆ ದೂರು ನೀಡಬಹುದು.
ದೂರು ಸಲ್ಲಿಸಿ;
ಸಾರ್ವಜನಿಕರು ದುಡಿಯುವ ಮಕ್ಕಳು ಕಂಡರೆ ತಕ್ಷಣವೇ ಪೆನ್ಸಿಲ್ ಪೋರ್ಟಲ್  www.pencil.gov.in ನಲ್ಲಿ ಸಹ ದೂರು ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್‌ಗಳ ಇಲಾಖೆ, ನಗರಾಭಿವೃದ್ಧಿ ಇಲಾಖೆ, ರೇಷ್ಮೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.  ದುಡಿಯುವ ಮಕ್ಕಳು ಅಥವಾ ಕಿಶೋರರು ಕಂಡುಬAದಲ್ಲಿ 1098 ಅಥವಾ ದೂ.ಸಂ. 080-22453549, 08539-221373/222590 ಗೆ ಸಂಪರ್ಕಿಸಬಹುದು.

Please follow and like us:
error