You are here
Home > Koppal News > ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ : ಜಾಥಾಕ್ಕೆ ಚಾಲನೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ : ಜಾಥಾಕ್ಕೆ ಚಾಲನೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಕಾರ್ಯ ಸ್ಥಳದಲ್ಲಿ ಮಾನಸಿಕ ಆರೋಗ್ಯ ಜಾಥಾ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೆಚ್. ರಾಮಕೃಷ್ಣ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಕೊಪ್ಪಳ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಕಾರ್ಯ ಸ್ಥಳದಲ್ಲಿ ಮಾನಸಿಕ ಆರೋಗ್ಯ ಜಾಥಾ ಕಾರ್ಯಕ್ರಮವನ್ನು ಮಂಗಳವಾರದಂದು ಹಳೇ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೆಚ್. ರಾಮಕೃಷ್ಣ ಅವರು ಮಾತನಾಡಿ, ಕಾರ್ಯ ಸ್ಥಳದಲ್ಲಿ ಮಾನಸಿಕ ಆರೋಗ್ಯ ಎಂಬುವುದು ಈ ಕಾರ್ಯಕ್ರಮದ ಘೋಷಣೆ ವಾಕ್ಯವಾಗಿದ್ದು, ಕೆಲಸದ ಒತ್ತಡದಿಂದ ಬಳಲದೇ ಎಲ್ಲರೂ ಮಾನಸಿಕ ರೋಗದಿಂದ ಮುಕ್ತರಾಗಿ, ಸಹ ಬಾಳ್ವೆಯನ್ನು ನಡೆಸಿ ಸಂತೋಷದಿಂದ ಬಾಳಬೇಕು ಎಂಬುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಕಾರ್ಯ ಸ್ಥಳದಲ್ಲಿ ಮಾನಸಿಕ ಆರೋಗ್ಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಜಿಲ್ಲಾ ಶಸ್ತ್ರ ಚಿಕಿತ್ಸಕ ಎಸ್.ಬಿ ದಾನರೆಡ್ಡಿ, ಜಿಲ್ಲಾ ಆಸ್ಪತ್ರೆಯ ಮನೋವೈದ್ಯ ಡಾ. ಕೃಷ್ಣ ವಿ. ಓಂಕಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಎಸ್.ಕೆ ದೇಸಾಯಿ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳು ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Top