ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ಬಸ್-ಪಾಸ್ ಪಡೆಯಲು ಕೌಂಟರ್ ಪ್ರಾರಂಭ

koppal_bus_stand: ಈ.ಕ.ರ.ಸಾ. ಸಂಸ್ಥೆವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ರಿಯಾಯಿತಿ ಬಸ್-ಪಾಸ್‌ಗಳನ್ನು ಪಡೆಯಲು ಜಿಲ್ಲಾಯ ವಿವಿಧ ಬಸ್ ನಿಲ್ದಾಣಗಳಲ್ಲಿ ಕೌಂಟರ್‌ಗಳನ್ನು ಪ್ರಾರಂಭಿಸಲಾಗಿದೆ ಎಂದು ಕೊಪ್ಪಳ ಈ.ಕ.ರ.ಸಾ. ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಕೊಪ್ಪಳ, ಅಳವಂಡಿ, ಕುಷ್ಟಗಿ, ಹನುಮಸಾಗರ, ತಾವರಗೇರಾ, ಯಲಬುರ್ಗಾ, ಗಂಗಾವತಿ, ಕನಕಗಿರಿ, ತಳಕಲ್ಲ, ಕುಕನೂರು, ಬಸ್ ನಿಲ್ದಾಣಗಳಲ್ಲಿ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸುಗಳನ್ನು ವಿತರಿಸಲು ಪ್ರತ್ಯೇಕ ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿದೆ. ಶಾಲಾ/ ಕಾಲೇಜು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಲು  ತಿಳಿಸಿದೆ.

Leave a Reply