ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಜಂತು ನಿವಾರಣಾ ಮಾತ್ರೆಯನ್ನು ನೀಡಲು ಕ್ರಮ ಕೈಗೊಳ್ಳಿ: ಪಿ. ಸುನೀಲ್ ಕುಮಾರ್


ಕೊಪ್ಪಳ ಜ.  : ರಾಷ್ಟಿçÃಯ ಜಂತುಹುಳು ನಿವಾರಣಾ ದಿನಾಚರಣೆ ಅಂಗವಾಗಿ ಅಲ್ಫೆಂಡಝೊಲ್ ಮಾತ್ರೆಯನ್ನು ನೀಡುವಾಗ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು, ಹಾಗೂ ಅವರಿಗೆ ಮಾತ್ರೆಗಳನ್ನು ನೀಡಲು ಅಗತ್ಯವಾದ ಸಮೀಕ್ಷೆ ಅಥವಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಂತುಹುಳು ನಿಯಂತ್ರಣ ಕಾರ್ಯಕ್ರಮದ ಅಧಿಕಾರಿಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಸುಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಷ್ಟಿçÃಯ ಜಂತುಹುಳು ನಿವಾರಣಾ ದಿನಾಚರಣೆಯ ಅಂಗವಾಗಿ ಇಂದು ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫೆಬ್ರವರಿ ೧೦ ರಂದು ರಾಷ್ಟಿçÃಯ ಜಂತುಹುಳು ನಿವಾರಣಾ ದಿನಾಚರಣೆ ಇದ್ದು ಇದರ ಅಂಗವಾಗಿ ನೀಡಲಾಗುವ ಜಂತುಹುಳು ನಿವಾರಣಾ ಮಾತ್ರೆಯನ್ನು ೦೧ ರಿಂದ ೧೯ ವರ್ಷದೊಳಗಿನ ಸರ್ಕಾರಿ, ಅನುದಾನಿತ ಖಾಸಗಿ ಶಾಲೆಗಳ ಮಕ್ಕಳು, ಅಂಗನವಾಡಿ ಮಕ್ಕಳು, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜಿನ ಮಕ್ಕಳು ಸೇರಿದಂತೆ ೫,೫೮,೦೮೭ ಮಕ್ಕಳಿಗೆ ಸಂಬAಧಿಸಿದ ಶಾಲೆ, ಕಾಲೇಜುಗಳಲ್ಲಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಅಥವಾ ಆಶಾ ಕಾರ್ಯಕರ್ತೆಯರು ನೀಡಬೇಕು. ಮಕ್ಕಳು ಮಾತ್ರೆಯನ್ನು ಮನೆಗೆ ತೆಗೆದುಕೊಂಡು ಹೋಗದಂತೆ ಎಚ್ಚರ ವಹಿಸಿ. ನಿಯಮಾನುಸಾರ ಮಾತ್ರೆಗಳನ್ನು ನೀಡಿ ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ, ತಾಂತ್ರಿಕ ಶಿಕ್ಷಣ ಇಲಾಖೆಗಳು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಔಷಧಿಗಳನ್ನು ನುಂಗಿಸಲು ತರಬೇತಿ ಅಥವಾ ಪ್ರತಿಕೂಲ ಸನ್ನಿವೇಶದ ನಿರ್ವಹಣೆಯ ಬಗ್ಗೆ ತಿಳುವಳಿಕೆ ನೀಡಬೇಕು. ಎಲ್ಲಾ ಶಾಲೆಗಳಲ್ಲಿ ದಾಖಲಾದ ಮಕ್ಕಳನ್ನು ಮಾತ್ರೆಯ ಸೇವನೆಯ ಮುಖಾಂತರ ಜಂತುಹುಳು ಮುಕ್ತರನ್ನಾಗಿ ಮಾಡಬೇಕು. ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮದಂದು ಗಯರುಹಾಜರಾದ, ಅನಾರೋಗ್ಯದ ಕಾರಣದಿಂದ ಮಾತ್ರಗಳನ್ನು ಸ್ವಿಕರಿಸದೇ ಇರುವ ಮಕ್ಕಳನ್ನು ಮಾಪ್‌ಅಪ್ ದಿನದಂದು ಮಾತ್ರೆಗಳನ್ನು ಸ್ವೀಕರಿಸುವಂತೆ ಮನವೊಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ದೊಡ್ಡಬಸಪ್ಪ ನೀರಲಕೇರಿ ಅವರಿಗೆ ಸೂಚನೆ ನೀಡಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಜಂಬಯ್ಯ ಜಂತುಹುಳುಗಳ ಕುರಿತು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಅಗತ್ಯ ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಜಂತುಹುಳು ನಿವಾರಣೆ ಕಾರ್ಯಕ್ರಮದ ಕುರಿತು ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಿಂಗರಾಜ, ಡಾ. ಮಹೇಶ, ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಧಿಕಾರಿ ಡಾ. ಎಸ್.ಕೆ. ದೇಸಾಯಿ, ಜಿಲ್ಲಾ ಮಕ್ಕಳ ರಕ್ಷಣಾ ಯೋಜನಾಧಿಕಾರಿ ಹರೀಶ್ ಜೋಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿನ ಕುಷ್ಠರೋಗಿಗಳಿಗೆ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಿ: ಪಿ. ಸುನೀಲ್ ಕುಮಾರ್
ಜಿಲ್ಲೆಯಲ್ಲಿನ ಕುಷ್ಠರೋಗಿಗಳಿಗೆ ಅಗತ್ಯ ಪುನರ್ವಸತಿ ಕಲ್ಪಿಸಲು ನಗರಸಭೆ ಸಹಕಾರದೊಂದಿಗೆ ಪ್ರತ್ಯೇಕ ಕಾಲೋನಿ ಅಥವಾ ವಸತಿ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ-೨೦೨೦ದ ಅಂಗವಾಗಿ ಇಂದು ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ೧೭೫ ಕುಷ್ಠರೋಗಿಗಳನ್ನು ಗುರುತಿಸಲಾಗಿದ್ದು, ಅವರಿಗೆ ಸೂಕ್ತ ಚಿಕಿತ್ಸೆಗೆ ಕ್ರಮ ಕೈಗೊಳ್ಳಿ. ಜಿಲ್ಲೆಯಲ್ಲಿ ಜನವರಿ ೩೦ ರಿಂದ ಫೆಬ್ರವರಿ ೧೩ ರವರೆಗೆ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ನಡೆಯಲಿದ್ದು, ಇದರಲ್ಲಿ ಸಂಬAಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ. ಕುಷ್ಠರೋಗಕ್ಕೆ ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ. ಆದ್ದರಿಂದ ಕುಷ್ಠರೋಗಿಗಳು ಹಿಂಜರಿಯದೆ ಬಂದು ಚಿಕಿತ್ಸೆ ಪಡೆಯಬಹುದು ಎಂದು ಅವರು ಹೇಳಿದರು.
ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಧಿಕಾರಿ ಡಾ. ಎಸ್. ಕೆ. ದೇಸಾಯಿ ಮಾತನಾಡಿ, ವ್ಕಿ÷್ತಯ ದೇಹದ ಮೇಲೆ ಯಾವುದೇ ಭಾಗದಲ್ಲಿ ತಿಳಿ ಬಿಳಿ ಅಥವಾ ತಾಮ್ರ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡುಬAದಲ್ಲಿ ಆರೋಗ್ಯ ಸಹಾಯಕರನ್ನು, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷಿಸಿಕೊಳ್ಳಬೇಕು. ಕುಷ್ಠರೋಗ ಸಂಪೂರ್ಣ ಗುಣಮುಖ ಹೊಂದುವ ಖಾಯಿಲೆಯಾಗಿದ್ದು ನಿರಂತರ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಕುಷ್ಠರೋಗದ ಹಾಗೂ ಅದರ ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮದ ಕುರಿತು ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಿಂಗರಾಜ, ಡಾ. ಮಹೇಶ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಜಂಬಯ್ಯ, ಜಿಲ್ಲಾ ಮಕ್ಕಳ ರಕ್ಷಣಾ ಯೋಜನಾಧಿಕಾರಿ ಹರೀಶ್ ಜೋಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Please follow and like us:
error