ಶಿಕ್ಷಕರ ತಾತ್ಕಾಲಿಕ ವರ್ಗಾವಣಾ ಆದ್ಯತಾ ಪಟ್ಟಿ ಪ್ರಕಟಿ : ಆಕ್ಷೇಪಣೆಗೆ ಆಹ್ವಾನ

: ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ೨೦೧೭-೧೮ ನೇ ಸಾಲಿ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಘಟಕದ ಹೊರಗಿನ & ಘಟಕದ ಒಳಗಿನ ಹಾಗೂ ಹೆಚ್ಚುವರಿ ಶಿಕ್ಷಕರ ತಾತ್ಕಾಲಿಕ ಆದ್ಯತಾ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.
೨೦೧೭-೧೮ ನೇ ಸಾಲಿನ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಘಟಕದ ಹೊರಗಿನ, ಘಟಕದ ಒಳಗಿನ ಮತ್ತು ಹೆಚ್ಚುವರಿ ಶಿಕ್ಷಕರ ವರ್ಗಾವಣೆಗಳಿಗೆ ಸಂಬಂಧಿಸಿದಂತೆ ತಾತ್ಕಾಲಿಕ ವರ್ಗಾವಣಾ ಆದ್ಯತಾ ಪಟ್ಟಿಗಳನ್ನು ಇಲಾಖೆಯ ವೆಬ್ ಸೈಟ್ www.cpigulgarga.kar.nic.in ದಲ್ಲಿ ಹಾಗೂ ಉಪನಿರ್ದೇಶಕರ ಕಛೇರಿ ಮತ್ತು ಜಿಲ್ಲೆಯ ವಿವಿಧ ಕ್ಷೇತ್ರ ಶಿಕ್ಷಾಧಿಣಾಕಾರಿಗಳ ಕಛೇರಿಯಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಘಟಕದ ಹೊರಗಿನ & ಘಟಕದ ಒಳಗಿನ ಶಿಕ್ಷಕಕರು ಸೆ. ೨೫ ರೊಳಗಾಗಿ ಮತ್ತು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರರು ತಮ್ಮ ಆಕ್ಷೇಪಣೆಗಳನ್ನು ಸೆ. ೨೪ ರೊಳಗಾಗಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು .

Please follow and like us:
error