ಶ್ರದ್ಧಾ ಭಕ್ತಿಯಿಂದ ದೇವರದಾಸಿಮಯ್ಯ,ಅಕ್ಕಮಹಾದೇವಿ ಜಯಂತಿ,ಮಹಾವೀರರ ಜಯಂತಿ ಆಚರಣೆ


ಕೊಪ್ಪಳ  ಆದ್ಯ ವಚನಕಾರ ದೇವರದಾಸಿಮಯ್ಯ ಅವರ ಜಯಂತಿ ಆಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು, ಮಾ. 22 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಶ್ರದ್ಧಾ ಭಕ್ತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಹೇಳಿದರು.
ದೇವರದಾಸಿಮಯ್ಯ ಅವರ ಜಯಂತಿ ಆಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇವರದಾಸಿಮಯ್ಯ ಜಯಂತಿ ಉತ್ಸವವನ್ನು ಮಾ. 22 ಜಿಲ್ಲಾ ಕೇಂದ್ರವಾಗಿರುವ ಕೊಪ್ಪಳದಲ್ಲಿ ಶ್ರದ್ಧಾ ಭಕ್ತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 8-30 ಗಂಟೆಗೆ ನಗರದ ಬನ್ನಿಕಟ್ಟೆ ಬಳಿಯ ಗೌರಿಶಂಕರ ದೇವಸ್ಥಾನದಿಂದ ದೇವರದಾಸಿಮಯ್ಯ ನವರ ಭಾವಚಿತ್ರ ಮೆರವಣಿಗೆ ಹೊರಡಲಿದ್ದು, ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಹಿತ್ಯ ಭವನದವರೆಗೂ ಸಾಗಿ ಬರಲಿದೆ. ಮೆರವಣಿಗೆಯಲ್ಲಿ ಹಲವು ಜಾನಪದ ಕಲಾ ತಂಡಗಳು ಭಾಗವಹಿಸಿ, ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ. ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲ್ಲಿ ವೇದಿಕೆ ಸಮಾರಂಭ ಜರುಗಲಿದ್ದು, ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಲು ಕಾರಟಗಿಯ ಗಂಗಮ್ಮ ಹಿರೇಮಠ ಅವರನ್ನು ಆಹ್ವಾನಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳೊಂದಿಗೆ ಪಾಸಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು. ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಮೆರವಣಿಗೆ ಹಾಗೂ ಸಮಾರಂಭದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಪಾಲ್ಗೊಳ್ಳಬೇಕು. ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್, ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ, ಮೆರವಣಿಗೆ ಸಾಗಿ ಬರುವ ರಸ್ತೆಯನ್ನು ಸ್ವಚ್ಛಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಹೇಳಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಯು. ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರಾದ ವಿಠ್ಠಪ್ಪ ಗೋರಂಟ್ಲಿ, ಕೆ. ಕಾಳಪ್ಪ, ಗಣ್ಯರಾದ ನಾಗರಾಜ ಬಳ್ಳಾರಿ, ಡಾ. ಮಹಾಂತೇಶ ಮಲ್ಲನಗೌಡರ, ಶಿವಾನಂದ ಹೊದ್ಲೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಾ. 29 ರಂದು ಮಹಾವೀರರ ಜಯಂತಿ : ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ
*******************
ಅಹಿಂಸಾ ತತ್ವಗಳ ಪ್ರತಿಪಾದಕ ಭಗವಾನ್ ಮಹಾವೀರರ ಜಯಂತಿಯನ್ನು ಸರ್ಕಾರಿ ಆದೇಶದನ್ವಯ ಸರ್ಕಾರಿ ಕಾರ್ಯಕ್ರಮವನ್ನಾಗಿ ಮಾ. 29 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಮಹಾವೀರ ಜಯಂತಿ ಆಚರಣೆ ಸಂಬಂಧ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾವೀರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಮಾ. 29 ರಂದು ಆಚರಿಸಲಾಗುವುದು. ಮಹಾವೀರರು ಅಹಿಂಸಾ ಪ್ರತಿಪಾದಕರಾಗಿದ್ದು, ಅವರ ಅಹಿಂಸಾ ತತ್ವ, ಸಂದೇಶಗಳ ಕುರಿತು ಅರಿವು ಮೂಡಿಸುವ ರೀತಿಯಲ್ಲಿ ಆಚರಿಸಲು ಆದ್ಯತೆ ನೀಡಲಾಗುವುದು. ಕಾರ್ಯಕ್ರಮದ ಅಂಗವಾಗಿ ಮಹಾವೀರರ ಭಾವಚಿತ್ರದ ಮೆರವಣಿಗೆ ಅಂದು ಬೆಳಿಗ್ಗೆ 7-30 ಗಂಟೆಗೆ ನಗರದ ಅಶೋಕ ವೃತ್ತದ ಬಳಿಯಿಂದ ಪ್ರಾರಂಭಿಸಲಾಗುವುದು. ಮೆರವಣಿಗೆಯು ಜವಾಹರ ರಸ್ತೆ, ಗಡಿಯಾರ ಕಂಬ ಮೂಲಕ ಗೋಶಾಲೆ ಬಳಿಯ ಮಹಾವೀರ ಜೈನಭವನದವರೆಗೆ ನೆರವೇರಲಿದೆ. ಮೆರವಣಿಗೆಯಲ್ಲಿ ಸಾಂಸ್ಕøತಿಕ ಕಲಾತಂಡಗಳ ಬದಲಿಗೆ ಅಹಿಂಸಾ ತತ್ವಗಳನ್ನು ಬಿಂಬಿಸುವ ಸಂದೇಶಗಳು ಹಾಗೂ ಸ್ತಬ್ಧಚಿತ್ರಗಳು ಭಾಗವಹಿಸಲಿವೆ. ಬೆಳಿಗ್ಗೆ 10 ಗಂಟೆಗೆ ಗೋಶಾಲೆ ಪಕ್ಕದಲ್ಲಿನ ಮಹಾವೀರ ಜೈನಭವನದಲ್ಲಿ ವೇದಿಕೆ ಸಮಾರಂಭ ಜರುಗಲಿದೆ. ಮಹಾವೀರರ ತತ್ವ ಸಂದೇಶಗಳ ಬಗ್ಗೆ ಡಾ. ಶಂಕ್ರಯ್ಯ ಅಬ್ಬಿಗೇರಿಮಠ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ಕೃಷ್ಣಮೂರ್ತಿ ದೇಸಾಯಿ ಅವರು ತಿಳಿಸಿದರು.
ಮೆರವಣಿಗೆ ಸಾಗಿ ಬರುವ ರಸ್ತೆಯ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಲು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಅಲ್ಲದೆ ಕಾರ್ಯಕ್ರಮದಲ್ಲಿ ಗಣ್ಯಮಾನ್ಯರಿಗೆ ಮಾಲಾರ್ಪಣೆಯ ಬದಲಿಗೆ ಮಹಾವೀರರ ಸಂದೇಶವನ್ನು ಬಿಂಬಿಸುವ ಪುಸ್ತಕಗಳನ್ನು ವಿತರಿಸಲು, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಭಾಗವಹಿಸಿದ್ದ ಜೈನ ಸಂಘದ ಪ್ರತಿನಿಧಿಗಳು ಮಾತನಾಡಿ, ಜೈನ ಸಮುದಾಯದವರು ಮಹಾವೀರ ಜಯಂತಿಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಹಕರಿಸಲಾಗುವುದು. ಕಾರ್ಯಕ್ರಮಕ್ಕೆ ಎಲ್ಲ ಸಮಾಜದವರು ಭಾಗವಹಿಸುವಂತೆ ಮನವಿ ಮಾಡಿಕೊಂಡರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಯು. ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರಾದ ನೇಮಿರಾಜ್, ಪದಮ್ ಮೆಹ್ತಾ, ಗೌತಮ್ ಝಾಂಗ್ಡಾ, ಗೌತಮ್ ಮೆಹ್ತಾ, ಮಹಾವೀರ ಮೆಹ್ತಾ, ಗಣ್ಯರಾದ ವಿಠ್ಠಪ್ಪ ಗೋರಂಟ್ಲಿ, ಮಹಾಂತೇಶ ಮಲ್ಲನಗೌಡರ, ಶಿವಾನಂದ ಹೊದ್ಲೂರ ಮುಂತಾದವರು ಭಾಗವಹಿಸಿದ್ದರು.

 

ಅರ್ಥಪೂರ್ಣ ಅಕ್ಕಮಹಾದೇವಿ ಜಯಂತಿ ಆಚರಣೆಗೆ ನಿರ್ಧಾರ
******************
ಅಕ್ಕಮಹಾದೇವಿ ಅವರ ಜಯಂತಿ ಆಚರಣೆಯನ್ನು ಇದೇ ಮೊದಲ ಬಾರಿಗೆ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು, ಮಾ. 31 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಶ್ರದ್ಧಾ ಭಕ್ತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಹೇಳಿದರು.
ಅಕ್ಕಮಹಾದೇವಿ ಅವರ ಜಯಂತಿ ಆಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಕ್ಕಮಹಾದೇವಿ ಜಯಂತಿ ಆಚರಣೆಯನ್ನು ಇದೇ ಮೊದಲ ಬಾರಿಗೆ ಸರ್ಕಾರಿ ಕಾರ್ಯಕ್ರಮವಾಗಿ ಮಾ. 31 ರಂದು ಕೊಪ್ಪಳದಲ್ಲಿ ಶ್ರದ್ಧಾ ಭಕ್ತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ಬೆಳಿಗ್ಗೆ 10.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲ್ಲಿ ವೇದಿಕೆ ಸಮಾರಂಭ ಜರುಗಲಿದ್ದು, ಸಮಾರಂಭದಲ್ಲಿ ವಿಶೇಷ ಉಪನ್ಯಾಸ, ಅಕ್ಕಮಹಾದೇವಿಯವರ ವಚನಗಾಯನ ಆಯೋಜಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳೊಂದಿಗೆ ಪಾಸಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು. ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಸಮಾರಂಭದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಪಾಲ್ಗೊಳ್ಳಬೇಕು. ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಹೇಳಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಯು. ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಮಹಿಳಾ ಸಂಘದ ಪ್ರತಿನಿಧಿಗಳು, ಗಣ್ಯರಾದ ವಿಠ್ಠಪ್ಪ ಗೋರಂಟ್ಲಿ, ಡಾ. ಮಹಾಂತೇಶ ಮಲ್ಲನಗೌಡರ, ಶಿವಾನಂದ ಹೊದ್ಲೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Please follow and like us:
error

Related posts