ಕೊಪ್ಪಳ : ಶ್ರೀ ಶಾರದಾ ಪೌಂಡೇಷನ್ ಟ್ರಸ್ಟ್ ನ ಶಾರದಾ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಶ್ರೀ ಶಾರದಾ ಪಿ.ಯು. ಕಾಲೇಜ್ ವತಿಯುಂದ ೨೮ ಹಾಗೂ ೨೯ರಂದು ಉತ್ತರ ಕರ್ನಾಟಕದ ಸಾಹಿತ್ಯ ಮತ್ತು ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾಹಿತ್ಯ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಎರಡು ದಿನಗಳ ಕಾಲ ನಡೆಯುವ ವಿವಿಧ ಗೋಷ್ಠಿಗಳು ಹಾಗೂ ಸಾಂಸ್ಕೃತಿಕ , ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ, ಇಸ್ರೋ ಮಾಜಿ ಅದ್ಯಕ್ಷ ಎ.ಎಸ್.ಕಿರಣಕುಮಾರ್, ಕನ್ನಡ ಅಭಿವೃದ್ದಿ ಪ್ರಾದಿಕಾರದ ಮಾಜಿ ಅದ್ಯಕ್ಷ ಎಸ್.ಜಿ.ಸಿದ್ದರಾಮಯ್ಯ , ಸಂಗೀತ ನಿರ್ದೇಶಕ ಹಂಸಲೇಖ, ರಘು ದಿಕ್ಷೀತ್ ಸೇರಿದಂತೆ ಇತರ ಗಣ್ಯರು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಲು ಕಾರ್ಯದರ್ಶಿ ಎಸ್.ಆರ್.ಪಾಟೀಲ್ , ಅದ್ಯಕ್ಷರಾದ ವಿ.ಆರ್.ಪಾಟೀಲ್ ಕೋರಿದ್ದಾರೆ.
Advertorial
Please follow and like us: