ಸಂಗೀತ ನೃತ್ಯ ಅಕಾಡೆಮಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

Koppal News  ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಪ್ರಸಕ್ತ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಾಸ್ತ್ರೀಯ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಸೇರಿದಂತೆ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ೧೬ ರಿಂದ ೨೪ ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಸದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ೧೦,೦೦೦ ರೂ.ಗಳನ್ನು ಶಿಷ್ಯ ವೇತನವಾಗಿ ನೀಡಲಾಗುವುದು. ಅರ್ಜಿಗಳನ್ನು ಕಛೇರಿ ವೇಳೆಯಲ್ಲಿ ಅಕಾಡೆಯ ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಉಚಿತವಾಗಿ ಪಡೆಯಬಹುದಾಗಿದೆ. ವೆಬ್‌ಸೈಟ್ www.karnatakasangeethanrithyaacademy.com ಮೂಲಕವು ಸಹ ಪಡೆಯಬಹುದು.
ಅರ್ಜಿಯ ಜೊತೆ ಇತ್ತೀಚಿನ ಪಠ್ಯಕ್ರಮವನ್ನು ನೀಡಲಾಗಿದ್ದು, ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಛಿಸುವವರು ೧೦ ರೂ. ಗಳ ಸ್ಟ್ಯಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ೨ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-೫೬೦೦೦೨ ಇಲ್ಲಿಗೆ ಕಳುಹಿಸಿಕೊಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಅಕಾಡೆಮಿಯ ವಿಳಾಸಕ್ಕೆ ಸೆಪ್ಟೆಂಬರ್. ೧೫ ರೊಳಗಾಗಿ ಕಳುಹಿಸಿಕೊಡಬೇಕು ಎಂದು ಕರ್ನಾಟಕ ಸಂಗೀತ ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ. ಅಂಗಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.