ಕೊಪ್ಪಳ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಹೇಳನಕಾರಿಯಾಗಿ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರು ಗ್ರಾಮದಲ್ಲಿ ಜರುಗಿದೆ.

ಶಾಮೀದ್ ಮುಲ್ಲಾ ಎಂಬ ಯುವಕ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದು, ವಾಟ್ಸಾಪ್ನಲ್ಲಿ ಹರಿಬಿಟ್ಟಿದ್ದಾನೆ. ಇದರಿಂದ ಯುವಕರ ಗುಂಪೊಂದು ಕೆರಳಿ ಹಿಗ್ಗಾಮುಗ್ಗಾ ಥಳಿಸಿ ತಾವರಗೇರಾ ಪೊಲೀಸರಿಗೆ ಒಪ್ಪಿಸಿ ಶಾಮೀದ್ ವಿರುದ್ಧ ದೂರು ದಾಖಲಿಸಿದ್ದಾರೆ. ಘಟನೆ ಹಿನ್ನೆಲೆ ಕುಷ್ಟಗಿ ಸಿಪಿಐ ಸುರೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
Please follow and like us: