ಸಂಸದರಿಂದ ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ

: ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ ೨೦೧೬-೧೭ ನೇ ಸಾಲಿನ ಲೋಕಸಭಾ ಸದಸ್ಯರ ಅನುದಾನದಲ್ಲಿ ಮಂಜೂರಾದ ತ್ರಿಚಕ್ರ ಮೋಟಾರು ವಾಹನಗಳನ್ನು ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ವಿಕಲಚೇತನ ಫಲಾನುಭವಿಗಳಿಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಮಂಗಳವಾರದಂದು ವಿತರಣೆ ಮಾಡಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ ೨೦೧೬-೧೭ ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು ೨೦ ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನ ಲೋಕಸಭಾ ಸದಸ್ಯರ ಅನುದಾನದಡಿ ಮಂಜೂರಾಗಿದ್ದು, ಫಲಾನುಭವಿಗಳಿಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಸಂಸದ ಕರಡಿ ಸಂಗಣ್ಣ ಅವರು ತ್ರಿಚಕ್ರ ಮೋಟಾರು ವಾಹನದ ಕೀ ವಿತರಣೆ ಮಾಡಿದರು.
ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Related posts