ಸರಸ್ವತಿ ವಿದ್ಯಾಮಂದಿರ ಶಾಲೆಯ ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹ

ಕೊಪ್ಪಳ : ನೆರೆ ಸಂತ್ರಸ್ತ ಕೊಡಗಿನ ಜನತೆಗೆ ನೆರವಾಗಲು ನಗರದ ಸರಸ್ವತಿ ವಿದ್ಯಾಮಂದಿರದ ವಿದ್ಯಾರ್ಥಿಗಳು ದೇಣಿಗೆ ಸಂಗ್ರಹಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಿಂದ ವರ್ತಕರಿಂದ ದೇಣಿಗೆ ಸಂಗ್ರಹಿಸಿದರು. ದೇಣಿಗೆಯಾಗಿ ಸಂಗ್ರಹಿಸಿದ ೧೦,೨೦೦/- ರೂ ಹಣವನ್ನು ಎಸಿ ಗೀತಾರವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ರೇಣುಕಾ ಅತ್ತನೂರ ಸೇರಿದಂತೆ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು

Please follow and like us: