fbpx

ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ವರ್ಚುವಲ್ ವೇದಿಕೆ ಕಾರ್ಯಕ್ರಮ-ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಪೂರ್ವ ಸಿದ್ಧತೆ ಪರಿಶೀಲನೆ


ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರಿಂದ ಪೂರ್ವ ಸಿದ್ಧತೆ ಪರಿಶೀಲನೆ
ಕೊಪ್ಪಳ  : ಸರ್ಕಾರದ ಒಂದು ವರ್ಷದ ಸಾಧನೆ ಕುರಿತು ಜುಲೈ. 27 ರಂದು ಜಿಲ್ಲಾಡಳಿತ ಭವನದಲ್ಲಿ ಆಡಿಟೋರಿಯಂ ಹಾಲ್‌ನಲ್ಲಿ ನಡೆಯಲಿರುವ ವರ್ಚುವಲ್ ವೇದಿಕೆ ಕಾರ್ಯಕ್ರಮದ ಪೂರ್ವಸಿದ್ಧತೆಯನ್ನು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಭಾನುವಾರದಂದು ಪರಿಶೀಲಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ “ಜನಸ್ನೇಹಿ ಆಡಳಿತ ಒಂದು ವರ್ಷ; ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” ಕಾರ್ಯಕ್ರಮವು ಜುಲೈ. 27 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮವು ವರ್ಚುವಲ್ ವೇದಿಕೆಯ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನೇರಪ್ರಸಾರವಾಗಲಿದೆ.  ಅದರ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ಪುಸ್ತಕ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದ ಪೂರ್ವಸಿದ್ಧತೆಗಳ ಕುರಿತು ಇಂದು (ಜುಲೈ.26) ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಉಪ ವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ವಾರ್ತಾಧಿಕಾರಿ ಜಿ.ಸುರೇಶ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
)

Please follow and like us:
error
error: Content is protected !!